2017ರ ಫೀಫಾ ವಿಶ್ವಕಪ್ಗೆ ಸರ್ಕಾರದ ಸಹಕಾರ
ನವದೆಹಲಿ: ಭಾರತದಲ್ಲಿ ಮೊದಲ ಬಾರಿಗೆ 2017ರಲ್ಲಿ ಆಯೋಜಿಸಲಾಗುತ್ತಿರುವ 17 ವರ್ಷದೊಳಗಿನವರ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು, ಸಂಪೂರ್ಣ ಪ್ರೋತ್ಸಾಹ ನೀಡುವುದಾಗಿ ಕೇಂದ್ರದ ನೂತನ ಕ್ರೀಡಾ ಸಚಿವ ಸರ್ಬಾನಂದ ಸೋನೊವಾಲ್ ಅವರು ಅಖಿಲ ಭಾರತ ಫುಟ್ಬಾಲ್ ಒಕ್ಕೂಟಕ್ಕೆ (ಎಐಎಫ್ಎಫ್) ಭರವಸೆ ನೀಡಿದ್ದಾರೆ.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕುಶಾಲ್ ದಾಸ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಐ-ಲೀಗ್ನ ಉಪಾಧ್ಯಕ್ಷರೂ ಆದ ಅಂಕುರ್ ದತ್ತಾ ಅವರು ಬುಧವಾರ ನೂತನ ಕ್ರೀಡಾ ಸಚಿವರನ್ನು ಅವರ ಕಚೇರಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದ್ದರು. ಸುಮಾರು ಅರ್ಧಗಂಟೆ ಕಾಲ ನಡೆದ ಸಚಿವರೊಂದಿಗಿನ ಮಾತುಕತೆಯಲ್ಲಿ, ಭಾರತದಲ್ಲಿ ಚೊಚ್ಚಲ ಬಾರಿಗೆ ನಡೆಯಲಿರುವ ಫೀಫಾ ವಿಶ್ವಕಪ್ಗೆ ಸಂಬಂಧಿಸಿದಂತೆ ಸರ್ಬಾನಂದ ಸೋನೊವಾಲ್ ಅವರಿಗೆ ಸಮಗ್ರ ಮಾಹಿತಿ ಒದಗಿಸಲಾಗಿದೆ. ಈ ಪಂದ್ಯಾವಳಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಕುಶಾಲ್ ದಾಸ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

