ವಿಶ್ವಕಪ್ ಹಾಕಿ: ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮಣಿಸಿದ ಭಾರತ
ದಿ ಹೇಗ್ (ನೆದರ್‌ಲೆಂಡ್ಸ್): ಪ್ರತಿಷ್ಠಿತ ವಿಶ್ವಕಪ್ ಹಾಕಿ ಸಿದ್ಧತೆಯಲ್ಲಿ ತೊಡಗಿರುವ ಭಾರತ ತಂಡದ ಆಟಗಾರರು ತಮ್ಮ ಕೊನೆಯ ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 4-1 ಗೋಲುಗಳಿಂದ ಜಯ ದಾಖಲಿಸಿದ್ದಾರೆ. ಆ ಮೂಲಕ ವಿಶ್ವಕಪ್‌ಗೆ ಸಕಾರಾತ್ಮಕ ಮನೋಭಾವದೊಂದಿಗೆ ಅಣಿಯಾದಂತಾಗಿದೆ.
ಭಾರತ ತಂಡದ ಪರ ರೂಪಿಂದರ್ ಪಾಲ್ ಸಿಂಗ್ ಎರಡು, ವಿ.ಆರ್. ರಘುನಾಥ್ ಮತ್ತು ನಾಯಕ ಸರ್ದಾರ್ ಸಿಂಗ್ ತಲಾ ಒಂದು ಗೋಲು ಗಳಿಸಿದರು. ಈ ಪೈಕಿ ಭಾರತ ಮೂರು ಗೋಲುಗಳನ್ನು ಪೆನಾಲ್ಟಿ ಕಾರ್ನರ್ ಅವಕಾಶಗಳಲ್ಲಿಯೇ ಸಂಪಾದಿಸಿದ್ದು ಉತ್ತಮ ಬೆಳವಣಿಗೆ ಎನಿಸಿತು.
ಇದಕ್ಕು ಮುನ್ನ ಭಾರತದ ಆಟಗಾರರು ತಮ್ಮ ಮೊದಲ ಅಭ್ಯಾಸ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ 1-2 ಗೋಲುಗಳಿಂದ ಸೋಲನುಭವಿಸಿದ್ದರು. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಪಂದ್ಯದಲ್ಲಿ ಗೆಲವು ದಾಖಲಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡರು.
ಭಾರತದ ಇಬ್ಬರು ಪ್ರಮುಖ ಆಟಗಾರರಾದ ರಮಣ್‌ದೀಪ್ ಸಿಂಗ್ ಮತ್ತು ನಿಕಿನ್ ತಿಮ್ಮಯ್ಯ ಪಂದ್ಯಾವಳಿಗೆ ಮುಂಚೆಯೇ ಗಾಯಗೊಂಡು ಹೊರಗುಳಿದಿರುವುದು ತಂಡಕ್ಕೆ ಭಾರಿ ನಷ್ಟವಾಗಿದೆ. ಭಾರತ ತಂಡದ ಆಟಗಾರರು ಬರುವ ಶನಿವಾರ ನಡೆಯಲಿರುವ “G’ ಗುಂಪಿನ ಪಂದ್ಯದಲ್ಲಿ ಬೆಲ್ಜಿಯಂ ವಿರುದ್ಧ ಸೆಣಸುವ ಮೂಲಕ ವಿಶ್ವಕಪ್‌ನಲ್ಲಿ ತಮ್ಮ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

