ಕ್ರೀಡೆ

ಸುನೀಲ್ ಆಯ್ಕೆ ಐಪಿಎಲ್ ಫೈನಲ್

Published On :

ಜಮೈಕಾ: ವೆಸ್ಟ್ ಇಂಡೀಸ್ ಆಟಗಾರ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಆಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಅವರು ತಮ್ಮ ರಾಷ್ಟ್ರೀಯ ತಂಡದಿಂದ ಹೊರಗುಳಿಯಬೇಕಾಗಿದೆ.
ವೆಸ್ಟ್ ಇಂಡೀಸ್ ತಂಡ ಜೂನ್ 8ರಿಂದ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಆಡಲಿದೆ. ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯು ಜೂ.1ರ ಒಳಗೆ ರಾಷ್ಟ್ರೀಯ ತಂಡ ಕೂಡಿಕೊಳ್ಳಬೇಕೆಂದು ಆಟಗಾರರಿಗೆ ಸೂಚನೆ ನೀಡಿತ್ತು. ಒಂದು ವೇಳೆ ಆಟಗಾರರು ಈ ಗಡುವಿನೊಳಗೆ ತಂಡ ಸೇರಿಕೊಳ್ಳದಿದ್ದರೆ, ಅವರನ್ನು ಟೆಸ್ಟ್ ತಂಡದಿಂದ ಹೊರಗಿಡುವುದಾಗಿ ಎಚ್ಚರಿಕೆ ನೀಡಿತ್ತು.
ಆದರೆ, ಸುನೀಲ್ ನಾರಾಯಣ್ ಹೊರತುಪಡಿಸಿ ಐಪಿಎಲ್‌ನಲ್ಲಿ ಪಾಲ್ಗೊಂಡಿರುವ ಉಳಿದ ಆಟಗಾರರು ತಮ್ಮ ದೇಶಕ್ಕೆ ಮರಳಿದ್ದಾರೆ. ಆದರೆ, ನಾರಾಯಣ್ ಪ್ರತಿನಿಧಿಸುತ್ತಿರುವ ಕೆಕೆಆರ್ ಫೈನಲ್ ತಲುಪಿರುವುದರಿಂದ ಅವರು ತಂಡದಲ್ಲಿ ಆಡುವುದು ಅನಿವಾರ್ಯವಾಗಿದೆ. ಹಾಗಾಗಿ ಅವರು ರಾಷ್ಟ್ರೀಯ ತಂಡದ ಬದಲು ಐಪಿಎಲ್ ಫೈನಲ್‌ನಲ್ಲಿ ಆಡುವುದನ್ನು ಆಯ್ಕೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.