ಮುದ್ಗಲ್ ವರದಿ ಕುರಿತು ಪ್ರತಿಕ್ರಿಯಿಸಲು ಸಚಿನ್ ನಕಾರ

ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್

ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣ ಸಂಬಂಧ ನ್ಯಾ. ಮುಕುಲ್ ಮುದ್ಗಲ್ ಸಮಿತಿ ವರದಿ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ನಿರಾಕರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದ್ದು, ಸದ್ಯ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವುದು ಸರಿಯಲ್ಲ. ನ್ಯಾಯಾಲಯದ ತೀರ್ಪಿಗೆ ನಾನು ತಲೆ ಬಾಗುತ್ತೇನೆ. ಈ ಬಗ್ಗೆ ಈಗಲೇ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.

ಐಪಿಎಸ್ 6ನೇ ಆವೃತ್ತಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ನಡೆದಿತ್ತು. ಈ ಸಂಬಂಧ ಸುಪ್ರೀಂಕೋರ್ಟ್ ನ್ಯಾ. ಮುಕುಲ್ ಮುದ್ಗಲ್ ನೇತೃತ್ವದ ಸಮಿತಿಯನ್ನು ರಚಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ಸುಪ್ರೀಂಕೋರ್ಟ್‌ಗೆ ತನಿಖೆ ಸಂಪೂರ್ಣ ವರದಿಯನ್ನು ಸಲ್ಲಿಸಿತ್ತು.

ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾ. ಮುಕುಲ್ ಮುದ್ಗಲ್ ನೀಡಿದ್ದ ವರದಿಯನ್ನು ಸುಪ್ರೀಂಕೋರ್ಟ್ ಬಹಿರಂಗಪಡಿಸಿದೆ. ಶ್ರೀನಿವಾಸನ್ ಅವರು ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com