
ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಮುಂದೂಡಲಾಗಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಹೇಳಿದೆ.
ಅದೇ ವೇಳೆ ಕಳೆದ ಬುಧವಾರ ತಡರಾತ್ರಿ ಸಾವನ್ನಪ್ಪಿರುವ ಕ್ರಿಕೆಟಿಗ ಫಿಲಿಪ್ ಹ್ಯೂಸ್ ಅವರ ಅಂತ್ಯಕ್ರಿಯೆ ಮುಂದಿನ ಬುಧವಾರ ನಡೆಯಲಿದೆ ಎಂಬ ಸುದ್ದಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿದೆ.
ಬಲ್ಲಮೂಲಗಳ ಪ್ರಕಾರ ಹ್ಯೂಸ್ ಅಂತ್ಯಕ್ರಿಯೆ ಬುಧವಾರ ಅಪರಾಹ್ನ 2 ಗಂಟೆಗೆ ಮಾಕ್ಸ್‌ವಿಲ್ಲೆಯಲ್ಲಿ ನಡೆಯಲಿದೆ.
ಆಸ್ಟ್ರೇಲಿಯಾದ ಕ್ರಿಕೆಟಿಗರು ಹ್ಯೂಸ್ ಅಂತ್ಯಕ್ರಿಯೆ ಸಮಾರಂಭದಲ್ಲಿ ಭಾಗವಹಿಸುವುದರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯವನ್ನು ಮುಂದೂಡಲಾಗಿದೆ. ಅದೇ ವೇಳೆ ಹ್ಯೂಸ್ ಮರಣ ನಂತರ ನಮ್ಮ ಕ್ರಿಕೆಟಿಗರು ಆಟ ಆಡುವ ಮನಸ್ಥಿತಿಯಲ್ಲಿ ಇಲ್ಲ ಎಂದು ರಿಕಿ ಪಾಂಟಿಂಗ್ ಹೇಳಿದ್ದರು.
ಆದಾಗ್ಯೂ, ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಗಬ್ಬಾದಲ್ಲಿ ನಡೆಯುವ ಟೆಸ್ಟ್ ಪಂದ್ಯದ ಹೊಸ ದಿನಾಂಕದ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ.
Advertisement