ಕ್ರೀಡೆ

ಏಷ್ಯನ್ ಗೇಮ್ಸ್: ಪಾಕ್ ವಿರುದ್ಧ ಗೆದ್ದ ಭಾರತ ಹಾಕಿ ತಂಡಕ್ಕೆ ಚಿನ್ನ

ಏಷ್ಯನ್ ಗೇಮ್ಸ್: ಪಾಕ್ ವಿರುದ್ಧ ಗೆದ್ದ ಭಾರತ ಹಾಕಿ ತಂಡಕ್ಕೆ ಚಿನ್ನ
Published On :

ಇಂಚಾನ್: 17ನೇ ಏಷ್ಯನ್ ಕ್ರೀಡಾಕೂಟದ ಹಾಕಿ ಫೈನಲ್ ನಲ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತಂಡ ಗೆಲುವು ಸಾಧಿಸಿದೆ.

ದಕ್ಷಿಣ ಕೊರಿಯಾದ ಇಂಚಾನ್‌ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದ ಹಾಕಿ ಫೈನಲ್ ನಲ್ಲಿ ಉಭಯ ತಂಡಗಳು ತಲಾ ಒಂದು ಗೋಲು ದಾಖಲಿಸಿ ಸಮಬಲ ಸಾಧಿಸಿದ್ದವು. ಹೀಗಾಗಿ ಎರಡು ತಂಡಗಳಿಗೆ ಪೆನಾಲ್ಟಿ ಶೂಟೌಟ್ ನೀಡಲಾಯಿತು. ಪಾಕ್ ವಿರುದ್ಧ ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಅಂತರದಲ್ಲಿ ಭಾರತ ಗೆಲವು ಸಾಧಿಸಿದೆ.

16 ವರ್ಷಗಳ ಬಳಿಕ ಭಾರತ ತಂಡ ಹಾಕಿ ಕ್ರೀಡೆಯಲ್ಲಿ ಗೆಲವು ಸಾಧಿಸಿದ್ದು, 2016ರ ಒಲಂಪಿಕ್ಸ್ ಗೆ ಭಾರತ ತಂಡ ಅರ್ಹತೆ ಪಡೆದಿದೆ.

1998 ನಂತರ ಭಾರತಕ್ಕೆ ಹಾಕಿ ಪಂದ್ಯದಲ್ಲಿ ಚಿನ್ನದ ಪದಕ ಒಲಿದು ಬಂದಿದ್ದು, ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ದ ಗೆಲವು ಸಾಧಿಸುವುದರ ಮೂಲಕ ವಿಜಯದ ನಗೆ ಬೀರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.