

ಇಂಚಾನ್: ದಕ್ಷಿಣ ಕೊರಿಯಾದ ಇಂಚಾನ್‌ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದೂವರೆದಿದ್ದು, ಶುಕ್ರವಾರ ಮಹಿಳಾ ಮತ್ತು ಪುರುಷರ ಕಬಡ್ಡಿ ತಂಡ ಚಿನ್ನದ ಪದಕಗಳನ್ನು ಗೆದ್ದುಕೊಂಡಿವೆ.
ಸಿಯೋನಾಕ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡ ಇರಾನ್ ವಿರುದ್ಧ 31-21 ಅಂಕಗಳ ಅಂತರದಿಂದ ಗೆಲುವು ಸಾಧಿಸಿದರೆ, ಅದೇ ಇರಾನ್ ವಿರುದ್ಧ ಭಾರತದ ಪುರುಷರ ತಂಡ 27-25 ಅಂಕಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು.
ಪುರುಷರ ಕಬಡ್ಡಿ ತಂಡಕ್ಕಿದು ಏಷ್ಯನ್ ಗೇಮ್ಸ್‌ನಲ್ಲಿ ಸತತ 7ನೇ ಬಾರಿಯ ಚಿನ್ನದ ಸಾಧನೆಯಾಗಿದೆ. ಇದರೊಂದಿಗೆ ಭಾರತ ಈವರೆಗೆ ಒಟ್ಟು 11 ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ.
Advertisement