ವಿಂಡೀಸ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ತಂಡದಿಂದ ರೋಹಿತ್ ಶರ್ಮಾ ಮತ್ತು ಅಶ್ವಿನ್ ಅವರನ್ನು ಕೈಬಿಡಲಾಗಿದೆ.
ಭಾರತದಲ್ಲಿ ನಡೆಯಲಿರುವ ವೆಸ್ಟ್‌ಇಂಡೀಸ್ ವಿರುದ್ಧ ಏಕದಿನ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಮಾತ್ರ ತಂಡವನ್ನು ಪ್ರಕಟಿಸಲಾಗಿದ್ದು, ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ರೋಹಿತ್ ಶರ್ಮಾ ಅವರನ್ನು ತಂಡದಿಂದ ಕೈಬಿಡಲಾಗಿದೆ. ತಂಡದ ಪ್ರಮುಖ ಬೌಲರ್ ಆರ್.ಅಶ್ವಿನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಸ್ಥಾನಕ್ಕೆ ಚಾಂಪಿಯನ್ಸ್ ಲೀಗ್‌ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿ ಆಯ್ಕೆದಾರರ ಗಮನ ಸೆಳೆದಿದ್ದ ಕುಲದೀಪ್ ಯಾದವ್ ಮತು ಅಮಿತ್ ಮಿಶ್ರಾ ಅವರಿಗೆ ಸ್ಥಾನ ಕಲ್ಪಿಸಲಾಗಿದೆ.
ಉಳದಂತೆ ಮೋಹಿತ್ ಶರ್ಮಾ, ಅಂಬಾಟಿ ರಾಯುಡು, ಮುರಳಿ ವಿಜಯ್ ಅವರು 14ರ ಬಳಗವನ್ನು ಸೇರಿಕೊಂಡಿದ್ದಾರೆ. ಇದೇ ಅಕ್ಟೋಬರ್ 8ರಿಂದ ವೆಸ್ಟ್‌ಇಂಡಿಸ್ ವಿರುದ್ಧದ ಸರಣಿ ಆರಂಭವಾಗಲಿದ್ದು, ಕೊಚ್ಚಿನ್‌ನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.
ಆಟಗಾರರ ಪಟ್ಟಿ ಇಂತಿದೆ.
ಮಹೇಂದ್ರ ಸಿಂಗ್ ಧೋನಿ (ನಾಯಕ)
ಶಿಖರ್ ಧವನ್
ವಿರಾಟ್ ಕೊಹ್ಲಿ
ಅಜಿಂಕ್ಯಾ ರಹಾನೆ
ಅಂಬಾಟಿ ರಾಯುಡು
ಮುರಳಿ ವಿಜಯ್
ಮೋಹಿತ್ ಶರ್ಮಾ
ಕುಲದೀಪ್ ಯಾದವ್
ಅಮಿತ್ ಮಿಶ್ರಾ
ಸುರೇಶ್ ರೈನಾ
ರವೀಂದ್ರ ಜಡೇಜಾ
ಭುವನೇಶ್ವರ ಕುಮಾರ್
ಮಹಮದ್ ಶಮಿ
ಉಮೇಶ್ ಯಾದವ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


