ಕೊಹ್ಲಿಗೆ ಅಗ್ರ ಸ್ಥಾನದ ಅವಕಾಶ

ನವದೆಹಲಿ: ಭಾರತದ ಭರವಸೆಯ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ರ್ಯಾಂಕಿಂಗ್ನಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರುವ ಅತ್ಯುತ್ತಮ ಅವಕಾಶ ಹೊಂದಿದ್ದಾರೆ.
ವರ್ಷದ ಆರಂಭದಲ್ಲಿ ಮೊದಲ ಸ್ಥಾನದಲ್ಲಿದ್ದ ಕೊಹ್ಲಿ, ನಂತರ ಬಾಂಗ್ಲಾದೇಶ ಪ್ರವಾಸದ ವೇಳೆ ವಿಶ್ರಾಂತಿ ಪಡೆದ ಹಿನ್ನೆಲೆಯಲ್ಲಿ ತಮ್ಮ ಸ್ಥಾನದಲ್ಲಿ ಕುಸಿತ ಕಂಡರು. ಹಾಗಾಗಿ ಪ್ರಸಕ್ತ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ 869 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿ 845 ಅಂಕ ಹೊಂದಿದ್ದಾರೆ. ಹಾಗಾಗಿ ಭಾರತದ ಬ್ಯಾಟ್ಸ್ಮನ್ 24 ಅಂಕಗಳ ಹಿನ್ನಡೆಯಲ್ಲಿದ್ದು, ವಿಂಡೀಸ್ ವಿರುದ್ಧ ತಮ್ಮ ಬ್ಯಾಟ್ನಿಂದ ರನ್ ಹರಿಸಿದರೆ, ಮತ್ತೆ ಅಗ್ರ ಸ್ಥಾನ ಪಡೆಯಲಿದ್ದಾರೆ. ಇನ್ನು 848 ಅಂಕ ಪಡೆದಿರುವ ದಕ್ಷಿಣ ಆಫ್ರಿಕಾದ ಹಶೀಂ ಆಮ್ಲಾ ದ್ವಿತೀಯ ಸ್ಥಾನದಲ್ಲಿದ್ದಾರೆ. ಉಳಿದಂತೆ ಅಗ್ರ ಹತ್ತರ ಪಟ್ಟಿಯಲ್ಲಿ ಭಾರತದ ನಾಯಕ ಮಹೇಂದ್ರ ಸಿಂಗ್ ಧೋನಿ 771 ಹಾಗೂ ಶಿಖರ್ ಧವನ್ 740 ಅಂಕಗಳೊಂದಿಗೆ ಕ್ರಮವಾಗಿ 6 ಮತ್ತು 7ನೇ ಸ್ಥಾನದಲ್ಲಿದ್ದಾರೆ.
ಇನ್ನು ಬೌಲಿಂಗ್ ರ್ಯಾಂಕಿಂಗ್ನಲ್ಲಿ ರವೀಂದ್ರ ಜಡೇಜಾ 677 ಅಂಕಗಳೊಂದಿಗೆ 5ನೇ ಸ್ಥಾನ ಪಡೆದಿರುವುದು ಅಗ್ರ ಹತ್ತರಲ್ಲಿರುವ ಭಾರತದ ಏಕೈಕ ಆಟಗಾರ ಎನಿಸಿದ್ದಾರೆ.
ಇನ್ನು ಭುವನೇಶ್ವರ್ ಕುಮಾರ್ 631 ಅಂಕಗಳೊಂದಿಗೆ 14ನೇ ಸ್ಥಾನ ಪಡೆದಿದ್ದು, ಉತ್ತಮ ಪ್ರದರ್ಶನ ನೀಡಿ ಅಗ್ರ ಹತ್ತರೊಳಗೆ ಸ್ಥಾನ ಪಡೆಯುವ ಅವಕಾಶವಿದೆ. ಅಲ್ರೌಂಡರ್ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ 372 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಪಾಕ್ನ ಮೊಹಮದ್ ಹಫೀಜ್ 424 ಹಾಗೂ ಶ್ರೀಲಂಕಾದ ಏಂಜೆಲೋ ಮ್ಯಾಥ್ಯೂಸ್ 387 ಅಂಕಗಳೊಂದಿಗೆ ಅಗ್ರ ಎರಡು ಸ್ಥಾನದಲ್ಲಿದ್ದಾರೆ. ಜಡೇಜಾ ವಿಂಡೀಸ್ ವಿರುದ್ಧ ಪರಿಣಾಮಕಾರಿ ಅಲ್ರೌಂಡ್ ಪ್ರದರ್ಶನ ನೀಡಿದರೆ, ಮ್ಯಾಥ್ಯೂಸ್ ಅವರನ್ನು ಹಿಂದಿಕ್ಕಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


