ಗೆಲುವಿನ ಋತುವಿಗೆ ಸಾನಿಯಾ ಪಣ

ಬೀಜಿಂಗ್: ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಯಶಸ್ಸು ಸಾಧಿಸಿರುವ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ, ಈ ಋತುವನ್ನು ಗೆಲುವಿನ ಸಿಹಿಯೊಂದಿಗೆ ಅಂತ್ಯ ಗೊಳಿಸಲು ಎದುರು ನೋಡುತ್ತಿದ್ದಾರೆ.
ಯು.ಎಸ್.ಓಪನ್ ಹಾಗೂ ಏಷ್ಯನ್ ಕ್ರೀಡಾಕೂಟದ ಮಿಶ್ರ ಡಬಲ್ಸ್‌ನಲ್ಲಿ ಚಾಂಪಿಯನ್ ಆಗಿ ಸಂಭ್ರಮಿಸಿದ ಸಾನಿಯಾ ಮಿರ್ಜಾ ಈಗ ಸಿಂಗಾಪುರದಲ್ಲಿ ನಡೆಯಲಿರುವ ವರ್ಷಾಂತ್ಯದ ಡಬ್ಲ್ಯೂ ಟಿಎ ಫೈನಲ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಈ ಟೂರ್ನಿಯಲ್ಲೂ ಜಯದ ಹಾದಿಯಲ್ಲಿ ಸಾಗಲು ಕಾತರಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ನಾನು ವರ್ಷಾಂತ್ಯದ ಟೆನಿಸ್ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದು, ಸಾಕಷ್ಟು ಕಾತುರಗೊಂಡಿದ್ದೇನೆ, ಪಂದ್ಯಾವಳಿಯಲ್ಲಿ ಬಲಿಷ್ಠ ಜೋಡಿಗಳು ಭಾಗವಹಿಸಲಿದ್ದು, ಇಲ್ಲಿ ಗೆಲುವು ದಾಖಲಿಸುವುದು ದೊಡ್ಡ ಸವಾಲಾಗಿದೆ. ಹಾಗಾಗಿ ನಮ್ಮ ಕೈಲಾದ ಪ್ರದರ್ಶನ ನೀಡಿ ಪ್ರಶಸ್ತಿ ಗೆಲ್ಲಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದ್ದಾರೆ. ಸಾನಿಯಾ ಮಿರ್ಜಾ ತಮ್ಮ ಜಿಬಾಬ್ವೆ ಜತೆಗಾರ್ತಿ ಕಾರಾ ಬ್ಲ್ಯಾಕ್ ಜತೆಗೆ ಬೇರ್ಪಟ್ಟಿದ್ದು, ಮುಂಬರುವ ಟೂರ್ನಿಯಲ್ಲಿ ವಿಶ್ವದ 4ನೇ ರ್ಯಾಂಕಿಂಗ್‌ನ ಜೈನೀಸ್ ತೈಪೇನ ಸು ವಿ ಶೀ ಜತೆಗೆ ಕಣಕ್ಕಿಳಿಯಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


