ಟಿ 20ಗೆ ಮನೀಷ್ ಪಾಂಡೆ

ಮುಂಬೈ: ಕರ್ನಾಟಕದ ಪ್ರತಿಭಾನ್ವಿತ ಬ್ಯಾಟ್ಸ್‌ಮನ್ ಮನೀಷ್ ಪಾಂಡೆ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕೈಕ ಟಿ 20 ಪಂದ್ಯಕ್ಕೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಐಪಿಎಲ್ ಪಂದ್ಯಾವಳಿಯಲ್ಲಿ ಗಮನ ಸೆಳೆಯುವ ಪ್ರದರ್ಶನ ನೀಡಿರುವ ಮನೀಷ್ ಪಾಂಡೆ ತಡವಾಗಿಯಾದರೂ ಆಯ್ಕೆ ಸಮಿತಿ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಐಪಿಎಲ್‌ನಲ್ಲಿ ಶತಕ ದಾಖಲಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎನಿಸಿದ್ದಾರೆ. ಸ್ಟುವರ್ಟ್ ಬಿನ್ನಿ ಸಹ ಟಿ 20 ತಂಡದಲ್ಲಿ ಸ್ಥಾನ ಪಡೆದಿದ್ದು, ಒಟ್ಟು ಇಬ್ಬರು ಕರ್ನಾಟಕದ ಆಟಗಾರರು ತಂಡದಲ್ಲಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಎರಡು ಏಕದಿನ ಪಂದ್ಯಗಳು ಮತ್ತು ಒಂದು ಟಿ-20 ಪಂದ್ಯಕ್ಕೆ ಮಂಗಳವಾರ ಭಾರತ ತಂಡವನ್ನು ಪ್ರಕಟಿಸಿದ್ದು, ಮೂರು ಪಂದ್ಯಗಳಿಗೆ ಸ್ಪಿನ್ ಬೌಲರ್ ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ವಿಂಡೀಸ್ ವಿರುದ್ಧದ 5 ಏಕದಿನ ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡ ಜಯ ಸಾಧಿಸಿತ್ತು. ನಂತರ ಎರಡನೇ ಪಂದ್ಯದಲ್ಲಿ ಜಯ ಸಾಧಿಸಿದ್ದ ಆತಿಥೇಯ ತಂಡ 1-1 ಅಂತರದಿಂದ ಸಮಬಲ ಸಾಧಿಸಿತ್ತು. ಆದರೆ ವೈಜಾಗ್‌ನಲ್ಲಿ ನಡಬೇಕಿದ್ದ 3ನೇ ಪಂದ್ಯ ಹುಡ್ ಹುಡ್ ಚಂಡಮಾರುತಕ್ಕೆ ಬಲಿಯಾದರೆ, ಉಳಿದ ಎರಡು ಪಂದ್ಯಗಳು ನಡೆಯಬೇಕಿದೆ. ಆದರೆ ಮೊದಲ ಪಂದ್ಯದಲ್ಲಿ ಸೋಲುವ ಮೂಲಕ ಭಾರತ ತಂಡ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಕಳೆದುಕೊಂಡಿದ್ದು, ಈಗ ಉಳಿದೆರಡು ಪಂದ್ಯಗಳಲ್ಲಿ ಭಾರೀ ಅಂತರಿಂದ ಗೆದ್ದರೂ ಅಗ್ರಪಟ್ಟಕ್ಕೆ ಮರಳಲು ಸಾಧ್ಯವಾಗುವುದಿಲ್ಲ.
ಏಕದಿನ ತಂಡ: ಮಹೇಂದ್ರ ಸಿಂಗ್ ಧೋನಿ, ಶಿಖರ್ ಧವನ್, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಅಮಿತ್ ಮಿಶ್ರಾ, ಭವನೇಶ್ವರ ಕುಮಾರ್, ಮೊಹ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮುರಳಿ ವಿಜಯ್, ಕುಲ್ದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್.
ಟಿ20 ತಂಡ: ಮಹೇಂದ್ರ ಸಿಂಗ್ ಧೋನಿ, ಶಿಖರ್ ಧವನ್, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಸ್ಟುವರ್ಟ್ ಬಿನ್ನಿ, ರವೀಂದ್ರ ಜಡೇಜಾ, ಭವನೇಶ್ವರ ಕುಮಾರ್, ಮೊಹ್ಮದ್ ಶಮಿ, ಸಂಜು ಸ್ಯಾಮ್ಸನ್, ಮನೀಷ್ ಪಾಂಡೆ, ಉಮೇಶ್ ಯಾದವ್ ಹಾಗೂ ಅಕ್ಷರ್ ಪಟೇಲ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


