ಕ್ರೀಡೆ

ಧೋನಿಗೆ ವಿಶ್ರಾಂತಿ, ಕೊಹ್ಲಿಗೆ ನಾಯಕ ಪಟ್ಟ

ಧೋನಿಗೆ ವಿಶ್ರಾಂತಿ, ಕೊಹ್ಲಿಗೆ ನಾಯಕ ಪಟ್ಟ
Published On :

ಮುಂಬೈ: ಶ್ರೀಲಂಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಬದಲಿಗೆ ವಿರಾಟ್ ಕೊಹ್ಲಿಗೆ ನಾಯಕತ್ವ ವಹಿಸಲಾಗಿದೆ.

5 ಏಕದಿನ ಪಂದ್ಯಗಳ ಪೈಕಿ ಮೂರು ಪಂದ್ಯಗಳಿಗೆ ತಂಡವನ್ನು ಆಯ್ಕೆ ಮಾಡಲಾಗಿದೆ. ವಿಶ್ರಾಂತಿ ಇಲ್ಲದೆ ಸತತವಾಗಿ ಕ್ರಿಕೆಟ್ ಸರಣಿಯಲ್ಲಿ ಹಾಡುತ್ತಿರುವ ಮಹೇಂದ್ರ ಸಿಂಗ್ ಧೋನಿಗೆ ಸದ್ಯ ವಿಶ್ರಾಂತಿ ನೀಡಲಾಗಿದ್ದು, ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ. ಧೋನಿ ಅನುಪಸ್ಥಿತಿಯಲ್ಲಿ ವೃದ್ಧಿಮಾನ್ ಸಾಹಾ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ.

ಇನ್ನುಳಿದಂತೆ ತಂಡದಲ್ಲಿ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಲಾಗಿದೆ. ಕುಲದೀಪ್ ಯಾದವ್ ಬದಲು ಆರ್. ಅಶ್ವಿನ್‌ರಿಗೆ ಅವಕಾಶ ನೀಡಲಾಗಿದೆ. ವೇಗಿ ಭುವನೇಶ್ವರ್ ಕುಮಾರ್‌ಗೆ ರೆಸ್ಟ್ ನೀಡಿ ಅವರ ಜಾಗಕ್ಕೆ ವರುಣ್ ಆರೋನ್‌ರನ್ನು ಆಯ್ಕೆ ಮಾಡಲಾಗಿದೆ.

ಶ್ರೀಲಂಕಾ ವಿರುದ್ಧದ 5 ಏಕದಿನ ಕ್ರಿಕೆಟ್ ಪಂದ್ಯಗಳನ್ನು ಕಟಕ್, ಹೈದರಾಬಾದ್, ರಾಂಚಿ, ಕೋಲ್ಕತಾ ಮತ್ತು ಅಹಮದಾಬಾದ್ ನಗರಗಳಲ್ಲಿ ಆಡಿಸಲು ತೀರ್ಮಾನಿಸಲಾಗಿದ್ದು. ಇನ್ನು ದಿನಾಂಕವನ್ನು ಘೋಷಿಸಿಲ್ಲ.

ಟೀಮ್ ಇಂಡಿಯಾ ತಂಡ
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ಅಜಿಂಕ್ಯ ರಹಾನೆ, ಸುರೇಶ್ ರೈನಾ, ಅಂಬಾಟಿ ರಾಯುಡು, ವೃದ್ಧಿಮಾನ್ ಸಾಹಾ, ಆರ್.ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಅಮಿತ್ ಮಿಶ್ರಾ, ಮುರಳಿ ವಿಜಯ್, ವರುಣ್ ಆರೋನ್, ಅಕ್ಸರ್ ಪಟೇಲ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.