ಕ್ರೀಡೆ

ಧೋನಿ @ ಫಸ್ಟ್ ಲುಕ್

ಧೋನಿ @ ಫಸ್ಟ್ ಲುಕ್
Published On :

ಕಳೆದ ಒಂದು ತಿಂಗಳಿನಿಂದ ಧೋನಿ ಆತ್ಮಚರಿತ್ರೆ ಕುರಿತ ಚಿತ್ರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗಾಳಿಸುದ್ದಿ ಹರಿದಾಡಿತ್ತಾದರೂ , ಈಗ ಧೋನಿ ಕುರಿತ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಮಾಡಿರುವ ಮಹಿ ಪತ್ನಿ ಸಾಕ್ಷಿ, ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಗುರುವಾರ ತಮ್ಮ ಟ್ವಿಟರ್‌ನಲ್ಲಿ ಚಿತ್ರದ ಪೋಸ್ಟರ್‌ನ್ನು ಪ್ರಕಟಿಸಿರುವ ಸಾಕ್ಷಿ, ಕಳೆದ ಕೆಲವು ದಿನಗಳಿಂದ ಕಂಡುಬಂದ ಎಲ್ಲ ಗೊಂದಲಗಳಿಗೆ ಇಲ್ಲಿ ಸ್ಪಷ್ಟನೆ ನೀಡುತ್ತಿದ್ದೇನೆ. ಇಷ್ಟು ದಿನಗಳು ಬಂದಿದ್ದೆಲ್ಲಾ ಸುಳ್ಳು ಎಂದು ಟ್ವೀಟ್ ಮಾಡಿದ್ದಾರೆ.

ನೀರಜ್ ಪಾಂಡೆ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ಧೋನಿ ಪಾತ್ರವನ್ನು ನಟ ಸುಶಾಂತ್ ಸಿಂಗ್ ರಜಪೂತ್ ನಿರ್ವಹಿಸಲಿದ್ದಾರೆ. ಈ ಚಿತ್ರವನ್ನು ಧೋನಿ ಸಹ ಮಾಲೀಕತ್ವದ ರಿತಿ ಸ್ಫೋರ್ಟ್ಸ್ ಸಮೂಹದ ಭಾಗವಾಗಿರುವ ಇನ್ಸ್‌ಪೈಯರ್ಡ್ ಎಂಟರ್‌ಟೇನ್‌ಮೆಂಟ್ ನಿರ್ಮಿಸಲಿದೆ.

ಈ ಚಿತ್ರ ಧೋನಿ ರಾಂಚಿಯಿಂದ ಭಾರತ ಕ್ರಿಕೆಟ್ ತಂಡದ ನಾಯಕನಾದ ಹಾದಿಯನ್ನು ಚಿತ್ರಿಸಲಿದೆ ಎಂಬ ಮಾತು ಕೇಳಿ ಬಂದಿದೆ. ಇನ್ನು ಚಿತ್ರದಲ್ಲಿ ಧೋನಿ ಖಾಸಗಿ ಜೀವನ ಅಂಶವೂ ಮೂಡಿಬರಲಿದ್ದು, ಖ್ಯಾತ ನಟಿ ದೀಪಿಕಾ ಪಡುಕೋಣೆ ಅಥವಾ ಶ್ರದ್ಧಾ ಕಪೂರ್ ಧೋನಿ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬ ಮಾತಿದೆಯಾದರೂ ಈ ಕುರಿತು ಅಧಿಕೃತ ಮಾಹಿತಿ ಹೊರಬಂದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.