ಅಥ್ಲೆಟಿಕ್ಸ್‌ನಲ್ಲಿ ರಾಜ್ಯದ ಪೂವಮ್ಮ ಕಂಚಿನ ಬೇಟೆ

ಭಾನುವಾರ ನಡೆದ ಮಹಿಳೆಯರ 400 ಮೀ. ಓಟದ ಫೈನಲ್ ಸುತ್ತಿನಲ್ಲಿ ಕರ್ನಾಟಕದ ಓಟಗಾರ್ತಿ ಪೂವಮ್ಮ ಅವರು 52..36 ಸೆಕೆಂಡ್‌ನಲ್ಲಿ ಗುರಿ ತಲುಪುವ ಮೂಲಕ ಮೂರನೇ ಸ್ಥಾನವನ್ನು ಪಡೆದು ಕಂಚಿನ ಹಾರಕ್ಕೆ ಭಾಜನರಾದರು. ಇನ್ನು ಬಹರೈನ್‌ನ ಒಲುವಕಿಮಿ ಮುಜಿದತ್(51.49 ಸೆ) ಚಿನ್ನದ ಪದಕ ಪಡೆದರೆ, ವಿಯೆಟ್ನಾಂನ ತಿ ಲನ್ ಕ್ವಾಚ್ (52.06 ಸೆ) ಬೆಳ್ಳಿ ಪದಕ ಪಡೆದರು. ಪ್ರಸಕತ್ ಭಾರತದಲ್ಲಿ ಪ್ರಮುಖ ಓಟಗಾರರಲ್ಲಿ ಒಬ್ಬರಾಗಿರುವ ರಾಜ್ಯದ ಪೂವಮ್ಮ ಅವರ ಮೇಲೆ ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಪಡೆಯುವಲ್ಲಿ ಎಡವಿದ್ದರು. ಏಷ್ಯಾದಲ್ಲಿ ಮಹಿಳೆಯರ 400 ಮೀಟರ್ ಓಟದಲ್ಲಿ 2ನೇ ರ್ಯಾಂಕಿಂಗ್ ಪಡೆದಿರುವ ಪೂವಮ್ಮ, ಈ ಬಾರಿ ಪದಕ ಪಡೆಯುವಲ್ಲಿ ಯಶಸ್ವಿಯಾದರು. ಕಳೆದ ವರ್ಷ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ 4/100ಮಿಡ್ಲೆ ರಿಲೆ ಹಾಗೂ 400 ಮೀ. ಓಟದಲ್ಲಿ ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆದಿದ್ದರು. 2008ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 4/100 ಮಿಡ್ಲೆ ರಿಲೆ ಹಾಗೂ 400 ಮೀ. ಓಟದಲ್ಲಿ ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಪದಕ ಬಾಚಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


