
ನವದೆಹಲಿ: ವಿಶ್ವಕಪ್ ಟೂರ್ನಿಯ ನಂತರ ಮಂಡಿ ನೋವಿನಿಂದ ಬಳಲುತ್ತಿರುವ ಭಾರತ ತಂಡದ ವೇಗದ ಬೌಲರ್ ಮೊಹಮದ್ ಶಮಿ ಐಪಿಎಲ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಗಳಿವೆ.
ಇದೇ ವೇಳೆ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ಎರಾನ್ ಫಿಂಚ್ ಸಹ ಸ್ನಾಯು ಸೆಳೆತದಿಂದ ಬಳಲುತಿದ್ದು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಡೆಲ್ಲಿ ಡೇರ್‍ಡೆವಿಲ್ಸ್ ತಂಡದ ಪರ ಐಪಿಎಲ್‍ನಲ್ಲಿ ಆಡಬೇಕಿದ್ದ ಮೊಹಮದ್ ಶಮಿ, ಈ ಆವೃತ್ತಿಯಲ್ಲಿ ಗಾಯದ ಸಮಸ್ಯೆಯಿಂದ ಕಣಕ್ಕಿಳಿದಿರಲಿಲ್ಲ.
ಶಮಿ ಅವರ ಗಾಯದ ಸಮಸ್ಯೆ, ಅವರು ಗುಣಮುಖರಾಗಲು ಬೇಕಾದ ಸಮಯ, ಫ್ರಾಂಚೈಸಿ ಅಶಮಿ ಬದಲಿಗೆ ಬೇರೆ ಆಟಗಾರನನ್ನು ಆಯ್ಕೆ ಮಾಡಿಕೊಳ್ಳಲು ಮನವಿ ಮಾಡುವರೇ ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಇನ್ನು ಮಂಗಳವಾರ ನಡೆದ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಅವರು ಗಾಯದ ಸಮಸ್ಯೆಗೆ ಒಳಗಾಗಿದ್ದರು. ಖುದ್ದು ಫಿಂಚ್ ಅವರೇ ತಮ್ಮ ಸ್ಕಾನಿಂಗ್ ವರದಿಗಳನ್ನು ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಪರೀಕ್ಷೆ ವರದಿಗಳ ಪ್ರಕಾರ, ತಾವು ಸಧ್ಯದ ಮಟ್ಟಿಗೆ ಚೇತರಿಸಿಕೊಳ್ಳುವುದು ಅಸಾಧ್ಯ ಎಂದಿದ್ದಾರೆ. ಇದು ಅವರು ಐಪಿಎಲ್‍ನ ಉಳಿದ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಆಡುವುದು ಅನುಮಾನವಾಗಿದೆ. ಆದರೆ, ಈ ಇಬ್ಬರ ಬಗ್ಗೆ ಬಿಸಿಸಿಐ ಅಥವಾ ಐಪಿಎಲ್‍ನಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Advertisement