
ನವದೆಹಲಿ: ಆಕ್ರಮಣಕಾರಿ ಮನೋಭಾವಕ್ಕೆ ಹೆಸರಾಗಿರುವ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಡವಳಿಕೆ ಬಗ್ಗೆ ಕಣ್ಣಿಟ್ಟಿರುವುದಾಗಿ ಬಿಸಿಸಿಐ ತಿಳಿಸಿದೆ.
ಪ್ರಸ್ತುತ ಐಪಿಎಲ್ 8ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿರುವ ಕೊಹ್ಲಿ ನಡವಳಿಕೆಯನ್ನು ಪರಿಶೀಲಿಸಲಾಗುತ್ತಿದ್ದು, ತಪ್ಪುಗಳು ಕಂಡುಬಂದಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ತಿಳಿಸಿದ್ದಾರೆ.
ವಿಶ್ವಕಪ್ ಸೆಮಿಫೈನಲ್‌ನಲ್ಲಿ ಅವರು ನೀಡಿದ ಪ್ರದರ್ಶನದ ಬಗ್ಗೆ ಟೀಕೆ ಮಾಡಲಾಗಿತ್ತು. ಇದರಿಂದಾಗಿ ಪತ್ರಕರ್ತರೊಬ್ಬರ ಮೇಲೆ ಹರಿಹಾಯುವ ಮೂಲಕ ಮುಖಪುಟದ ಸುದ್ದಿಯಾಗಿದ್ದರು. ಬಿಸಿಸಿಐ ಈ ಕುರಿತು ಕೊಹ್ಲಿ ಅವರಿಗೆ ಎಚ್ಚರಿಕೆ ನೀಡಿತ್ತು.
Advertisement