ಆಕ್ರಮಣಶೀಲತೆ ಯಶಸ್ಸಿನ ಮೆಟ್ಟಿಲು

ಆಕ್ರಮಣಶೀಲ ಮನೋಭಾವ ಹೊಂದಿರುವ ವಿರಾಟ್ ಕೊಹ್ಲಿಯಂಥ ಆಟಗಾರರು ಟೀಂ ಇಂಡಿಯಾದಲ್ಲಿರಬೇಕೆಂದು ಮಾಜಿ ಕ್ರಿಕೆಟಿಗ ಹಾಗೂ ಕಿರಿಯರ ಕ್ರಿಕೆಟ್ ತಂಡಗಳ...
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್
Updated on: 

ಚೆನ್ನೈ: ಆಕ್ರಮಣಶೀಲ ಮನೋಭಾವ ಹೊಂದಿರುವ ವಿರಾಟ್ ಕೊಹ್ಲಿಯಂಥ ಆಟಗಾರರು ಟೀಂ ಇಂಡಿಯಾದಲ್ಲಿರಬೇಕೆಂದು ಮಾಜಿ ಕ್ರಿಕೆಟಿಗ ಹಾಗೂ ಕಿರಿಯರ ಕ್ರಿಕೆಟ್ ತಂಡಗಳ ತರಬೇತುದಾರ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಅಂತ್ಯಗೊಂಡ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅನೌಪಚಾರಿಕ ಎರಡನೇ ಟೆಸ್ಟ್ ಪಂದ್ಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿಯೊಂದರ ನಾಯಕತ್ವ ವಹಿಸಿಕೊಂಡಿರುವ ವಿರಾಟ್ ಕೊಹ್ಲಿ, ತಮ್ಮ ಆಕ್ರಮಣಕಾರಿ ಆಟದಿಂದ ಉತ್ತಮ ಪ್ರದರ್ಶನ ನೀಡಬೇಕೆಂಬ ಆಶಯವನ್ನು ಇದೇ ವೇಳೆ ವ್ಯಕ್ತಪಡಿಸಿದರು.

ಜವಾಬ್ದಾರಿ ಇದೆ: ಕೊಹ್ಲಿ ತನ್ನ ಜವಾಬ್ದಾರಿ ಏನೆಂಬ ಸಂಪೂರ್ಣ ಅರಿವು ತನಗಿದೆ ಎಂದು ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆಂದು ಪಿಟಿಐ ವರದಿ ಮಾಡಿದೆ. ಶನಿವಾರ ಮುಕ್ತಾಯವಾದ ಭಾರತ ಹಾಗೂ ಆಸ್ಟ್ರೇಲಿಯಾ 'ಎ' ತಂಡಗಳ ನಡುವಿನ ಅನೌಪಚಾರಿಕ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ವಿರಾಟ್ ಕೊಹ್ಲಿ, ಪಂದ್ಯದ ನಂತರ ತಮ್ಮ ಅನಿಸಿಕೆಯನ್ನು ಸುದ್ದಿಗಾರರೊಂದಿಗೆ ಹಂಚಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com