
ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 112 ರನ್ ಗಳಿಗೆ ಆಲೌಟ್ ಆಗುವ ಮೂಲಕ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ರಂಗನಾ ಹೆರಾತ್ ಸ್ಪಿನ್ ದಾಳಿಗೆ ಮಂಕಾದ ಭಾರತದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಗೆ ಹೆಜ್ಜೆ ಹಾಕಿದರು.
23 ರನ್ ಗೆ ಒಂದು ವಿಕೆಟ್ ಕಳೆದುಕೊಂಡಿದ್ದ ಭಾರತ ಶನಿವಾರ ಬ್ಯಾಟಿಂಗ್ ಆರಂಭಿಸಿತು, ಭೋಜನ ವಿರಾಮದ ವೇಳೆಗೆ ಪ್ರಮುಖ ಆಟಗಾರರು ವಿಕೆಟ್ ಒಪ್ಪಿಸಿದರು. ಶಿಖರ್ ಧವನ್ ಹೊರತುಪಡಿಸಿದರೆ ಬೇರೆ ಯಾರೂ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ.
ಉತ್ತಮವಾಗಿ ಆಡುತ್ತಿದ್ದ ರಹಾನೆ ಸಹ ಹೆರಾತ್ ದಾಳಿಗೆ ಸಿಕ್ಕಿ ಪೆವಿಲಿಯನ್ ಹಾದಿ ಹಿಡಿದರು. ಅಂತಿಮವಾಗಿ ಭಾರತ ಶ್ರೀಲಂಕಾ ವಿರುದ್ಧ ಟೆಸ್ಟ್ ಗೆಲ್ಲುವ ಕನಸನ್ನು ಸಾಕಾರ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ.
Advertisement