

ನವದೆಹಲಿ: ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರು ``ನಾನು ವಿಶ್ವದ ನಂಬರ್ ಒನ್ ಆಟಗಾರನಾಗುವುದಾಗಿ ಶುಭ ನುಡಿದಿದ್ದರು'' ಎಂದು ಪ್ರತಿಷ್ಠಿತ ಅರ್ಜುನ ಕ್ರೀಡಾ ಪ್ರಶಸ್ತಿಗೆ ಆಯ್ಕೆಯಾಗಿ ರುವ ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ ಕಿಡಾಂಬಿ ಶ್ರೀಕಾಂತ್ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ವಿಶ್ವ ಬ್ಯಾಡ್ಮಿಂಟನ್ ರ್ಯಾಂಕಿಂಗ್‍ನಲ್ಲಿ ಅಗ್ರ 5ರಲ್ಲಿ ಸ್ಥಾನ ಪಡೆದಿದ್ದಾರೆ. ವಿಶ್ವ ಬ್ಯಾಡ್ಮಿಂಟನ್‍ಗೂ ಮುನ್ನ ಸಚಿನ್‍ರನ್ನು ಭೇಟಿಯಾಗಿದ್ದು ಅತ್ಯಂತ ಸ್ಮರಣೀಯ ಕ್ಷಣ ಎಂದರು.