29ರಿಂದ ರಾಜ್ಯ ಮಟ್ಟದ ಟೆಕ್ವಾಂಡೋ

ಧಾರವಾಡ: ಇದೇ ತಿಂಗಳು ಆ.29 ಮತ್ತು 30 ರಂದು ಇಲ್ಲಿನ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 33ನೇ ಟೆಕ್ವಾಂಡೋ ಚಾಂಪಿಯನ್ ಶಿಪ್ ಪಂದ್ಯಾವಳಿ ನಡೆಯಲಿದೆ.
ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಟೇಕ್ವಾಂಡೋ ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಸಿ.ಜಿ.ಶಶಿವರ್ಧನ, ಹಿರಿಯ-ಕಿರಿಯ ಹಲವು ತೂಕದ ವಿಭಾಗಗಳಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ 300-400 ಸ್ಪರ್ಧಾಳುಗಳು ಭಾವವಹಿಸುವ ನಿರೀಕ್ಷೆ ಇದೆ. ಈ ಸ್ಪರ್ಧೆಯಲ್ಲಿ ಬಂಗಾರದ ಪದಕ ಪಡೆದ ಕ್ರೀಡಾಪಟುಗಳು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗುತ್ತಾರೆ ಎಂದರು.
ಸುಮಾರು 500 ವರ್ಷಗಳ ಇತಿಹಾಸವಿರುವ ಟೆಕ್ವಾಂಡೋ 9 ಬಗೆಯ ಸಮರ ಕಲೆಗಳ ವಿಕಸಿತ ರೂಪ. 1950ರ ಸಮಯದಲ್ಲಿ ಕ್ರೀಡೆಯಾಗಿ ಬೆಳಕಿಗೆ ಬಂದಿರುವ ಇದು, ಅಲ್ಪಾವಧಿಯಲ್ಲೇ ಒಲಂಪಿಕ್ಸ್ ಗೆ ಅರ್ಹತೆ ಪಡೆದ ಕೊರಿಯನ್ ನಿಶ್ಯಸ್ತ್ರ ಕಲೆ. ಭಾರತೀಯ ಟೆಕ್ವಾಂಡೋ ಫೆಡರೇಶನ್, ಕರ್ನಾಟಕ ಟೆಕ್ವಾಂಡೋ ಸಂಸ್ಥೆ, ರಾಜ್ಯ ಒಲಂಪಿಕ್ ಅಸೋಸಿಯೇಶನ್ ಈ ಸ್ಪರ್ಧೆ ನಡೆಸುತ್ತಿವೆ ಎಂದು ಮಾಹಿತಿ ನೀಡಿದರು.
ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಎಂ.ಎಸ್.ಗರಗ ಮಾತನಾಡಿ, ಆ.29ರ ಸಮಾರಂಭದಲ್ಲಿ ಸಂಸದ ಪ್ರಹ್ಲಾದ್ ಜೋಶಿ, ಜಿಲ್ಲಾಧಿಕಾರಿ ಪಿ.ರಾಜೇಂದ್ರ ಚೋಳನ್, ಶಾಸಕರಾದ ವಿನಯ ಕುಲಕರ್ಣಿ, ಅರವಿಂದ ಬೆಲ್ಲದ, ಹಿರಿಯ ವಕೀಲರಾದ ಬಿ.ಡಿ.ಹಿರೇಮಠ, ವಿ.ಡಿ.ಕಾಮರೆಡ್ಡಿ ಭಾಗವಹಿಸಲಿದ್ದಾರೆ. ಟೆಕ್ವಾಂಡೋ ಮಾತ್ರವಲ್ಲದೆ, ಪುಂಷೆ (ಕಠಾಸ್) ವಿಭಾಗದಲ್ಲಿ ಸಿಂಗಲ್, ಮಿಕ್ಸ್ ಡಬಲ್, ಗ್ರೂಪ್ ವಿಭಾಗದಲ್ಲಿ ಸ್ಪರ್ಧೆಗಳು ಜರುಗಲಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


