ಕೊಲಂಬೋ ಟೆಸ್ಟ್ : ವಿಜಯ್, ರಹಾನೆ ಅರ್ಧ ಶತಕ

ಪಿ. ಸಾರಾ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಪಂದ್ಯದ ನಾಲ್ಕನೇ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕೊಲಂಬೊ:  ಪಿ. ಸಾರಾ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಪಂದ್ಯದ ನಾಲ್ಕನೇ ದಿನವಾದ ಇಂದು, ಟೀಂ ಇಂಡಿಯಾ 259 ರನ್ ಗಳ ಮುನ್ನಡೆ ಸಾಧಿಸಿಕೊಂಡಿದೆ.

ಮೂರನೇ ದಿನದಾಟದ ನಿನ್ನೆ ಭಾರತ 1 ವಿಕೆಟ್ ನಷ್ಟಕ್ಕೆ 70 ರನ್ ಗಳಿಸಿತ್ತು. ನಾಲ್ಕನೇ ದಿನದಾಟ ಆರಂಭಿಸಿದ ಭಾರತ ತಂಡದ ಮುರಳಿ ವಿಜಯ್ ಮತ್ತು ಅಜಿಂಕ್ಯ ರಹಾನೆ ಬ್ಯಾಟಿಂಗ್ ಉತ್ತಮವಾಗಿ ಬ್ಯಾಟಿಂಗ್ ಮಾಡಿದರು. ಇತ್ತೀಚಿನ ವರದಿ ಬಂದಾಗ ಭಾರತ ತಂಡ 3 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದ್ದು, ಅಜಿಂಕ್ಯ ರಹಾನೆ (76 ರನ್) ಮತ್ತು ರೋಹಿತ್ ಶರ್ಮಾ (1 ರನ್) ಕ್ರೀಸ್ ಕಾಯ್ದು ಕೊಂಡಿದ್ದಾರೆ.

ಉತ್ತಮವಾಗಿ ಬೌಲಿಂಗ್ ಮಾಡಿದ ಶ್ರೀಲಂಕಾದ ಕೌಶಾಲ್  ಅವರು 10 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಮತ್ತು 82 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ವಿಜಯ್ ಅವರು ಎಲ್ ಬಿ ಬಲೆಗೆ ಕೆಡವುವಲ್ಲಿ ಯಶಸ್ವಿಯಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com