ರಾಷ್ಟ್ರಪತಿಯವರಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಸಾನಿಯಾ ಮಿರ್ಜಾ

ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಂದ ಪ್ರತಿಷ್ಥಿತ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದರು...
ಸಾನಿಯಾ ಮಿರ್ಜಾ, ಪ್ರಣಬ್ ಮುಖರ್ಜಿ
ಸಾನಿಯಾ ಮಿರ್ಜಾ, ಪ್ರಣಬ್ ಮುಖರ್ಜಿ
Updated on: 
ನವದೆಹಲಿ: ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಂದ ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದರು. 
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 28ರ ಹರೆಯದ ಹೈದರಾಬಾದ್ ಮೂಲದ ಸಾನಿಯಾ ಮಿರ್ಜಾ ಅವರು ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದರು. 
ಭಾರತದ ಲಿಜೆಂಡರಿ ಟೆನಿಸ್ ತಾರೆ ಲಿಯಾಂಡರ್ ಪೇಸ್ ಬಳಿಕ ಸಾನಿಯಾ ಮಿರ್ಜಾ ಖೇಲ್ ರತ್ನ ಪ್ರಶಸ್ತಿ ಪಡೆದ ಎರಡನೇ ಆಟಗಾರ್ತಿಯಾಗಿದ್ದಾರೆ.
ದೇಶದ ಜನತೆ ಹಾಗೂ ಕುಟುಂಬ ವರ್ಗಕ್ಕೆ ಸಮರ್ಪಿಸಿದ ಸಾನಿಯಾ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಾನಿಯಾ ಮಿರ್ಜಾ ಖೇಲ್ ರತ್ನ ಪ್ರಶಸ್ತಿ ಸಿಕ್ಕಿರುವುದು ಸಂತಸ ತಂದಿದೆ. ಈ ಪ್ರಶಸ್ತಿಯನ್ನು ದೇಶದ ಜನತೆ ಹಾಗೂ ನನ್ನ ಕುಟುಂಬವರ್ಗಕ್ಕೆ ಅರ್ಪಿಸುತ್ತೇನೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com