ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹೋಗಲು ಹಣ ಕೇಳಿಲ್ಲ: ಸಾನಿಯಾ

ವಾರ್ಷಿಕ ಕ್ರೀಡಾ ಪ್ರಶಸ್ತಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಹಣ ಕೇಳಿಲ್ಲ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಗುರುವಾರ...
ಸಾನಿಯಾ ಮಿರ್ಜಾ
ಸಾನಿಯಾ ಮಿರ್ಜಾ

ನವದೆಹಲಿ: ವಾರ್ಷಿಕ ಕ್ರೀಡಾ ಪ್ರಶಸ್ತಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಹಣ ಕೇಳಿಲ್ಲ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಮಧ್ಯಪ್ರದೇಶ ಸರ್ಕಾರ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಟೆನಿಸ್ ತಾರೆ 75 ಸಾವಿರ ರುಪಾಯಿ ಮೌಲ್ಯದ ಮೇಕಪ್ ಕಿಟ್ ಹಾಗೂ ಪ್ರಯಾಣಿಸಲು ಖಾಸಗಿ ವಿಮಾನದ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿತ್ತು.

ಈ ಬಗ್ಗೆ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿರುವ ಸಾನಿಯಾ, ನಾನು ಹಣ ಕೇಳಿಲ್ಲ. ಆದರೆ ಅದೇ ದಿನ ಗೋವಾದಲ್ಲಿ ಮತ್ತೊಂದು ಕಾರ್ಯಕ್ರಮ ನಿಗದಿಯಾಗಿದ್ದರಿಂದ ಖಾಸಗಿ ವಿಮಾನ ಪ್ರಯಾಣದ ಬೇಡಿಕೆ ಇಟ್ಟಿದ್ದೆ ಅಷ್ಟೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com