ಇಂಡೋ-ಪಾಕ್ ಕ್ರಿಕೆಟ್‍ಗೆ ಬೆಂಬಲ

ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬಹು ಚರ್ಚಿತ ಇಂಡೋ-ಪಾಕ್ ಸರಣಿಯ ಪ್ರಸ್ತಾವನೆಯನ್ನು ಕೇಂದ್ರ ಕ್ರೀಡಾ ಸಚಿವ ಸರ್ಬಾನಂದ...
ಸರ್ಬಾನಂದ ಸೊನೊವಾಲ್
ಸರ್ಬಾನಂದ ಸೊನೊವಾಲ್
ನವದೆಹಲಿ: ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬಹು ಚರ್ಚಿತ ಇಂಡೋ-ಪಾಕ್ ಸರಣಿಯ ಪ್ರಸ್ತಾವನೆಯನ್ನು ಕೇಂದ್ರ ಕ್ರೀಡಾ ಸಚಿವ ಸರ್ಬಾನಂದ ಸೊನೊವಾಲ್ ಬೆಂಬಲಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧ ವೃದ್ಧಿಸುವ ಅವಕಾಶ ಸಿಕ್ಕಿದಾಗಲೆಲ್ಲಾ ಬಿಸಿಸಿಐ ತನ್ನ ಶಕ್ತಿ ಮೀರಿ ಕಾರ್ಯ ನಿರ್ವಹಿಸುತ್ತದೆ. ಅಷ್ಟೇ ಅಲ್ಲ, ಹಿಂದೆಯೂ ಭಾರತ-ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯವು ಆಯೋಜನೆಯಾದಾಗಲೆಲ್ಲಾ ಸಾಕಷ್ಟು ಕಾಳಜಿ ವಹಿಸುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಉಭಯ ದೇಶಗಳ ನಡುವಿನ ಕ್ರಿಕೆಟ್ ಬಾಂಧವ್ಯವನ್ನು ಪುನರಾರಂಬಿsಸುವ ನಿಟ್ಟಿನಲ್ಲಿ ಬಿಸಿಸಿಐ ಕೈಗೊಳ್ಳುವ ಪ್ರಯತ್ನಗಳನ್ನು ನಾವು ಬೆಂಬಲಿಸಬೇಕಿದೆ'' ಎಂದವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com