ಭಾರತ-ಪಾಕ್ ಕ್ರಿಕೆಟ್ ಸರಣಿ ನಡೆಸುವುದಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ನಿರಾಕರಣೆ?

ಭಾರತ- ಪಾಕಿಸ್ತಾನ ಕ್ರಿಕೆಟ್ ಸರಣಿ ನಡೆಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸುವುದು ಬಹುತೇಕ ಖಚಿತವಾಗಿದೆ.
ಭಾರತ- ಪಾಕಿಸ್ತಾನ ಕ್ರಿಕೆಟ್ ಸರಣಿ (ಸಾಂಕೇತಿಕ ಚಿತ್ರ)
ಭಾರತ- ಪಾಕಿಸ್ತಾನ ಕ್ರಿಕೆಟ್ ಸರಣಿ (ಸಾಂಕೇತಿಕ ಚಿತ್ರ)

ನವದೆಹಲಿ: ಭಾರತ- ಪಾಕಿಸ್ತಾನ ಕ್ರಿಕೆಟ್ ಸರಣಿ ನಡೆಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸುವುದು ಬಹುತೇಕ ಖಚಿತವಾಗಿದೆ.
ದೇಶದಲ್ಲಿರುವ ಸಾರ್ವಜನಿಕರ ಮನೋಭಾವನೆಯನ್ನು ಪರಿಗಣಿಸಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿಗೆ ಅನುಮತಿ ನೀಡದೇ ಇರುವುದಕ್ಕೆ ತೀರ್ಮಾನಿಸಿದ್ದು ಬಿಸಿಸಿಐ ಪ್ರಸ್ತಾವನೆಯನ್ನು ತಿರಸ್ಕರಿಸುವುದು ಬಹುತೇಕ ಖಚಿತವಾಗಿದೆ. 
ಪಾಕಿಸ್ತಾನ ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವುದರಿಂದ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಸರಣಿ ಆಯೋಜಿಸುವುದರ ವಿರುದ್ಧ ಸಾರ್ವಜನಿಕ ಭಾವನೆ ವ್ಯಕ್ತವಾಗಿದೆ. ಒಂದು ವೇಳೆ ಸರ್ಕಾರ ಅನುಮತಿ ನೀಡಿದ್ದರೆ ಈ ವರೆಗೆ ನಿಡಬೇಕಿತ್ತು ಆದರೆ ಸರಣಿ ಬಗ್ಗೆ ಭಾರತ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಕ್ರಿಕೆಟ್ ಸರಣಿ ಆಯೋಜಿಸುವುದಕ್ಕೆ ಅನುಮತಿ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆದರೆ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಭಾರತ-ಪಾಕ್ ಕ್ರಿಕೆಟ್ ಸರಣಿ ಬಗ್ಗೆ ಇನ್ನೂ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. ಶ್ರೀಲಂಕಾದಲ್ಲಿ ಭಾರತ- ಪಾಕಿಸ್ತಾನ ಕ್ರಿಕೆಟ್ ಸರಣಿ ನಡೆಸಲು ಬಿಸಿಸಿಐ ಕೇಂದ್ರ ಸರ್ಕಾರದ ಅನುಮತಿ ಕೋರಿತ್ತು. ಕ್ರಿಕೆಟ್ ಸರಣಿ ಆಯೋಜಿಸುವುದಕ್ಕೆ ಪಾಕ್ ಪ್ರಧಾನಿ ನವಾಜ್ ಷರೀಫ್ ಒಪ್ಪಿಗೆ ಸೂಚಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com