
ರಾಯ್ ಪುರ: ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಪ್ರಬಲ ಬೆಲ್ಜಿಯಂ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಗೆದ್ದು ಮತ್ತೆ ಚಾಂಪಿಯನ್ ಪಟ್ಟವನ್ನು ಉಳಿಸಿಕೊಂಡಿದೆ.
ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ 2-1 ಗೋಲುಗಳಿಂದ ಬೆಲ್ಜಿಯಂ ಪಡೆಯನ್ನು ಮಣಿಸಿತು. ಆ ಮೂಲಕ ಚಾಂಪಿಯನ್ ಆಯಿತು. ಆಸ್ಟ್ರೇಲಿಯಾ ಪರ ಜರ್ಮಿ ಹೆವರ್ಡ್ 16ನೇ, ಮ್ಯಾಥ್ಯೂ ಡೌಸನ್ 21ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಬೆಲ್ಜಿಯಂ ತಂಡದ ಪರ ಸಿಮೊನ್ ಗೌನಾರ್ಡ್ ಪಂದ್ಯದ 60ನೇ ಅಂತಿಮ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಅವಕಾಶದಲ್ಲಿ ಗೋಲು ದಾಖಲಿಸಿ ಸೋಲಿನ ಅಂತರವನ್ನು ಕಡಿಮೆ ಮಾಡಿದರು. ಈ ಪ್ರಶಸ್ತಿ ಗೆಲ್ಲುವ ಮೂಲಕ ಆಸೀಸ್ ವಿಶ್ವ ಹಾಕಿಯಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದೆ.
Advertisement