ಯುಪಿ ವಾರಿಯರ್ಸ್ ತಂಡದಲ್ಲಿ ಹಣ ಹೂಡುವ ಮೂಲಕ ಕುಸ್ತಿಯ ಅಭಿವೃದ್ಧಿಗೆ ಕೈಜೋಡಿಸಿದ್ದೇನೆ. ಇದರಿಂದ ನನಗೆ ಬಹಳ ಸಂತೋಷವಾಗುತ್ತಿದೆ. ನಮ್ಮ ತಂಡದಲ್ಲಿ ಖ್ಯಾತ ಕುಸ್ತಿ ಪಟು ಸುಶೀಲ್ ಕುಮಾರ್ ಸೇರಿದಂತೆ ಸಾಕಷ್ಟು ಉತ್ತಮ ಕುಸ್ತಿ ಪಟುಗಳಿದ್ದು, ಲೀಗ್ನಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದೇವೆ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.