
ಕರಾಚಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ನಡೆದ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಐದು ವರ್ಷಗಳ ನಿಷೇಧಕ್ಕೆ ಗುರಿಯಾಗಿದ್ದ ಪಾಕ್ ಕ್ರಿಕೆಟಿಗ ಮಹಮ್ಮದ್ ಆಮೀರ್ ಶೀಘ್ರದಲ್ಲೇ ರಾಷ್ಟ್ರೀಯ ತಂಡಕ್ಕೆ ಸೇರ್ಪಡೆಗೊಳ್ಳುವ ಕಾಲ ಸನ್ನಿಹಿತವಾಗಿದೆ.
ಇಷ್ಟರಲ್ಲೇ ಆರಂಭಗೊಳ್ಳಲಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಅವರು ಪಾಕ್ ತಂಡದಲ್ಲಿ ಸ್ಥಾನ ಗಳಿಸುವ ಸಾಧ್ಯತೆಗಳಿವೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯ ಹಿರಿಯ ಅಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ. ಆದರೆ, ಭಾರತ ವಿರುದ್ಧದ ಸರಣಿ ನಡೆದರೆ ಅದರಲ್ಲಿ ಆಮೀರ್‍ಗೆ ಅವಕಾಶವಿಲ್ಲ ಎಂದು ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್ ಸ್ಪಷ್ಟಪಡಿಸಿದ್ದಾರೆ. ಅಮೀರ್‍ಗೆ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ನೀಡಕೂಡದೆಂದು ಇತ್ತೀಚೆಗೆ ಪಾಕಿಸ್ತಾನದ ಕೆಲವು ಹಾಲಿ ಹಾಗೂ ಮಾಜಿ ಕ್ರಿಕೆಟರ್‍ಗಳು ಆಗ್ರಹಿಸಿದ್ದರು.
Advertisement