

ಬೆಂಗಳೂರು: ಹಿಮ್ಮಡಿ ಗಾಯದ ಸಮಸ್ಯೆಯಿಂದ ಚೇತರಿಕೆ ಕಾಣುತ್ತಿರುವ ಭಾರತದ ನಂ.1 ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್, ಮುಂದಿನ ವಾರದಿಂದ ಮತ್ತೆ ಅಭ್ಯಾಸ ಆರಂಭಿಸಲಿದ್ದಾರೆ ಎಂದು ಅವರ ತಂದೆ ಹರ್ವೀರ್ ಸಿಂಗ್ ತಿಳಿಸಿದ್ದಾರೆ.
ಸದ್ಯಕ್ಕೆ ತವರಿನ ನಗರ ಹೈದರಾಬಾದ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಾ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದು, ಯಾವುದೇ ಆತಂಕವಿಲ್ಲ. ಬಹುತೇಕ ಮುಂದಿನ ವಾರದಿಂದ ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಲಿದ್ದಾರೆ ಎಂದು ಹೇಳಿದ್ದಾರೆ. ಸೈನಾ ಗಾಯದ ಹಿನ್ನೆಲೆಯಲ್ಲಿ ಕಳೆದ ತಿಂಗಳು ನಡೆದ ಹಾಂಕಾಂಗ್ ಓಪನ್ ಟೂರ್ನಿಯಿಂದ ಹೊರಗುಳಿದಿದ್ದರು. ಅಲ್ಲದೆ ಬಿಡಬ್ಲ್ಯೂಎಫ್ ಸೂಪರ್ ಸರಣಿ ಫೈನಲ್ಸ್ ನಲ್ಲಿ ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರಿತ್ತು.