ಏಳನೇ ಸ್ಥಾನಕ್ಕೆ ಕುಸಿದ ಸರ್ದಾರ್ ಪಡೆ

ಇತ್ತೀಚೆಗಷ್ಟೇ ವಿಶ್ವ ಹಾಕಿ ಲೀಗ್ ಫೈನಲ್ ಟೂರ್ನಿಯಲ್ಲಿ ಕಂಚಿನ ಪದಕ ಪಡೆಯವಲ್ಲಿ ಯಶಸ್ವಿಯಾದ ಭಾತ ಹಾಕಿ ತಂಡ ನೂತನ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್...
ಹಾಕಿ
ಹಾಕಿ
Updated on: 

ನವದೆಹಲಿ: ಇತ್ತೀಚೆಗಷ್ಟೇ ವಿಶ್ವ ಹಾಕಿ ಲೀಗ್ ಫೈನಲ್ ಟೂರ್ನಿಯಲ್ಲಿ ಕಂಚಿನ ಪದಕ ಪಡೆಯವಲ್ಲಿ ಯಶಸ್ವಿಯಾದ ಭಾತ ಹಾಕಿ ತಂಡ ನೂತನ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್ ರ್ಯಾಂಕಿಂಗ್ ಪಟ್ಟಿಯಲ್ಲಿ ಒಂದು ಸ್ಥಾನ ಕುಸಿತ ಕಂಡಿದೆ. ಇದಕ್ಕೂ ಮುನ್ನ 6ನೇ ಸ್ಥಾನದಲ್ಲಿದ್ದ ಭಾರತ ತಂಡ, ಶನಿವಾರ ಬಿಡುಗಡೆಯಾದ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದೆ. ಸರ್ದಾರ್ ಸಿಂಗ್ ನೇತೃತ್ವದ ಭಾರತ ತಂಡ ಕಳೆದ ತಿಂಗಳಷ್ಟೇ 8ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಜಿಗಿದಿತ್ತು. ಇನ್ನು ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಇನ್ನು ಹಾಲೆಂಡ್ ಎರಡನೇ ಹಾಗೂ ಜರ್ಮನಿ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಇಂಗ್ಲೆಂಡ್, ಬೆಲ್ಜಿಯಂ ಹಾಗೂ ಅರ್ಜೆಂಟೀನಾ ತಂಡಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com