

ವೆಲ್ಲಿಂಗ್ಟನ್: ಮೊಣಕಾಲು ನೋವಿನಿಂದ ಬಳಲುತ್ತಿರುವ ಶ್ರೀಲಂಕಾದ ಬೌಲರ್ ಲಸಿತ್ ಮಾಲಿಂಗಾ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಅಲಭ್ಯರಾಗಲಿದ್ದಾರೆಂದು ಶ್ರೀಲಂಕಾ ಕ್ರಿಕೆಟ್ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರದಿಂದ ಆರಂಭಗೊಳ್ಳಲಿರುವ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಎರಡು ದಿನಗಳ ಪಂದ್ಯಗಳಿಗೆ ಮಾಲಿಂಗಾ ಹಾಜರಾಗುವುದು ಅನುಮಾನ ಎನ್ನಲಾಗಿತ್ತು.
ಆದರೆ, ನೋವಿನ ಸಮಸ್ಯೆಯಿಂದ ಇನ್ನೂ ಚೇತರಿಸಿಕೊಳ್ಳದ ಅವರು ಇಡೀ ಸರಣಿಗೇ ಅಲಭ್ಯರಾಗಲಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. ಲಸಿತ್ ಮಾಲಿಂಗಾ ಬದಲಿಗೆ ಇದೀಗ ತಿಸಾರಾ ಪೆರೇರಾ ಅವರು ತಂಡವನ್ನು ಸೇರ್ಪಡೆಗೊಂಡಿದ್ದಾರೆ.