ಯಾಸೀರ್ ಶಾಹ
ಕ್ರೀಡೆ
ಸ್ಪಿನ್ನರ್ ಯಾಸಿರ್ ಅಮಾನತು
ಡೋಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದಷ್ಟೇ ಶ್ರೀಲಂಕಾ ಕ್ರಿಕೆಟಿಗ ಕುಸಲ್ ಪೆರೇರಾ ನಾಲ್ಕು ವರ್ಷಗಳ ನಿಷೇಧಕ್ಕೆ ಒಳಗಾದ ಬೆನ್ನಲ್ಲೇ ಈಗ ಪಾಕಿಸ್ತಾನದ...
ದುಬೈ: ಡೋಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದಷ್ಟೇ ಶ್ರೀಲಂಕಾ ಕ್ರಿಕೆಟಿಗ ಕುಸಲ್ ಪೆರೇರಾ ನಾಲ್ಕು ವರ್ಷಗಳ ನಿಷೇಧಕ್ಕೆ ಒಳಗಾದ ಬೆನ್ನಲ್ಲೇ ಈಗ ಪಾಕಿಸ್ತಾನದ ಲೆಗ್ ಸ್ಪಿನ್ನರ್ ಯಾಸಿರ್ ಶಾ ಸಹ ಡೋಪಿಂಗ್ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿದ್ದು ಐಸಿಸಿಯಿಂದ ಅಮಾನತು ಶಿಕ್ಷೆಗೆ ಒಳಗಾಗಿದ್ದಾರೆ. ಕಳೆದ ತಿಂಗಳು ನಡೆದಿದ್ದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಸಂದರ್ಭದಲ್ಲಿ, ಆಟಗಾರರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ನವೆಂಬರ್ 13ರಂದು ಆಟಗಾರರಿಂದ ನಮೂನೆಗಳನ್ನು ಪಡೆಯಲಾಗಿತ್ತು. ಆದರೆ, ಯಾಸಿರ್ ಗೆ ತಾವು ನೀಡಿರುವ ಬಿ ಮಾದರಿ ನಮೂನೆಗಳ ಪರೀಕ್ಷೆ ನಡೆಸಲು ಮೇಲ್ಮನವಿ ಸಲ್ಲಿಸಬಹುದು. ಅಲ್ಲಿ ಅವರು ತೇರ್ಗಡೆಯಾದರೆ ಅಮಾನತು ಶಿಕ್ಷೆ ತೆರವಾಗಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ