ನವದೆಹಲಿ: ಮುಂದಿನ ಎರಡು ವರ್ಷಗಳ ಕಾಲ ಐಪಿಎಲ್ ನಿಂದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಗಳು ಅಮಾನತುಗೊಂಡಿದ್ದರೂ, ಬಿಸಿಸಿಐ ವಿರುದ್ಧ ತಮ್ಮ ಹೋರಾಟ ಮುಂದುವರಿಸಲು ನಿರ್ಧರಿಸಿವೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ ಈ ಎರಡು ಫ್ರಾಂಚೈಸಿಗಳನ್ನು ಎರಡು ವರ್ಷಗಳ ಕಾಲ ಅಮಾನತು ಮಾಡಲಾಗಿದ್ದರೂ, ಬಿಸಿಸಿಐ ವಾರ್ಷಿಕ ಫ್ರಾಂಚೈಸಿಯ ಶುಲ್ಕದ ಶೇ.30ರಷ್ಟನ್ನು ಜನವರಿ 2ರ ಒಳಗಾಗಿ ಪಾವತಿಸುವಂತೆ ಸೂಚಿಸಿದೆ.
ಬಿಸಿಸಿಐನ ಈ ಕ್ರಮದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಸಿಎಸ್ ಕೆ ಮತ್ತು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಗಳು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ.