ವಿರಾಟ್ ಕೊಹ್ಲಿಗೆ ಪಾಲಿ ಉಮ್ರಿಗರ್ ಪ್ರಶಸ್ತಿ

ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಅವರು ಎರಡನೇ ಬಾರಿ ಪಾಲಿ ಉಮ್ರಿಗರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ಮುಂಬೈ: ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಅವರು ಎರಡನೇ ಬಾರಿ ಪಾಲಿ ಉಮ್ರಿಗರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರತಿ ವರ್ಷ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶ್ರೇಷ್ಠ ಪ್ರದರ್ಶನ ತೋರಿದ ಆಟಗಾರನನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಈ ಪ್ರಶಸ್ತಿಗೆ ಆಯ್ಕೆ ಮಾಡುತ್ತದೆ. 
2014-2015ನೇ ಸಾಲಿನಲ್ಲಿ ಉತ್ತಮ ಪ್ರದರ್ಶನ ತೋರಿದ ಕೊಹ್ಲಿ ಈ ಬಾರಿ ಮತ್ತೆ ಪಾಲಿ ಉಮ್ರಿಗರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 27 ವರ್ಷದ ಕೊಹ್ಲಿ ಈ ಹಿಂದೆ 2011-12ನೇ ಸಾಲಿನಲ್ಲಿ ಈ ಪ್ರಶಸ್ತಿ ಪಡೆದಿದ್ದರು.
ಜನವರಿ 5ರಂದು ಮುಂಬೈನಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿರಾಟ್ ಕೊಹ್ಲಿಗೆ ಈ ಪ್ರಶಸ್ತಿ ನೀಡಲಾಗುವುದು. ಟ್ರೋಫಿ ಹಾಗೂ 5 ಲಕ್ಷ ರುಪಾಯಿ ನಗದು ಬಹುಮಾನವನ್ನು ಈ ಪ್ರಶಸ್ತಿ ಒಳಗೊಂಡಿದೆ. 
ಈ ಹಿಂದೆ ಸಚಿನ್‌ ತೆಂಡೂಲ್ಕರ್‌, ವೀರೇಂದ್ರ ಸೆಹ್ವಾಗ್‌, ಗೌತಮ್‌ ಗಂಭೀರ್‌, ರಾಹುಲ್‌ ದ್ರಾವಿಡ್‌, ಆರ್ ಅಶ್ವಿನ್, ಭುವನೇಶ್ವರ ಕುಮಾರ್ ಅವರು ‘ಪಾಲಿ ಉಮ್ರಿಗರ್‌’ ಪ್ರಶಸ್ತಿ ಪಡೆದುಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com