ವಿಶ್ವಕಪ್: ಭಾರತ ತಂಡಕ್ಕೆ ಶುಭಾಶಯ ಕೋರಿದ ಮೋದಿ

ವಿಶ್ವಕಪ್ ಕಪ್‌ಗೆ ಕ್ರಿಕೆಟ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ: ವಿಶ್ವಕಪ್ ಕಪ್‌ಗೆ ಕ್ರಿಕೆಟ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ತಂಡಕ್ಕೆ ಶುಕ್ರವಾರ ಶುಭಾಶಯ ಕೋರಿದ್ದಾರೆ.

ಈ ಕುರಿತಂತೆ ಇಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, 2015 ವಿಶ್ವಕಪ್ ಟೂರ್ನಿಯ ಫೆ.15ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹಣಾಹಣಿಗೆ ಶುಭಾಶಯ ಕೋರುವಂತೆ ಪಾಕಿಸ್ತಾನದ ಪ್ರಧಾನಿ ನಾವಾಜ್ ಶರೀಫ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಇದಲ್ಲದೇ, ಈಗಾಗಲೇ
ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಗಾನಿ, ಶ್ರೀಲಂಕಾ ಮುಖ್ಯಸ್ಥ ಮೈತ್ರಿಪಾಲ ಸಿರಿಸೇನಾ ಹಾಗೂ ಬಾಂಗ್ಲಾದೇಶದ ಮುಖ್ಯಸ್ಥ ಶೇಕ್ ಹಸೀನಾ ಅವರಿಗೂ ಶುಭಾಶಯ ಕೋರುವಂತೆ ಮೋದಿ ಆಹ್ವಾನ ನೀಡಿದ್ದಾರೆ.

11ನೇ ಐಸಿಸಿ ಕ್ರಿಕೆಟ್ ಮಹಾಸಮರದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನ್ಯೂಜಿಲ್ಯಾಂಡ್‌ನ ಕ್ರಿಸ್ಟ್ ಚರ್ಚ್‌ನಲ್ಲಿರುವ ನಾರ್ತ್ ಹಗ್ಲೇ ಪಾರ್ಕ್‌ನಲ್ಲಿ ಅದ್ದೂರಿಯಾಗಿ ನಡೆಯಿತು. ವಿಶ್ವಕಪ್‌ನಲ್ಲಿ 14 ರಾಷ್ಟ್ರಗಳು ಭಾಗವಹಿಸಲಿದ್ದು, ಶನಿವಾರ ಮೊದಲ ಪಂದ್ಯ ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ನಡುವಣ ಪ್ರಾರಂಭವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com