

ಮೆಲ್ಬರ್ನ್: 'ಇದು ಮತ್ತೊಂದು ಪರಿಪೂರ್ಣ ಆಟ' ಎಂದು ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಭಾನುವಾರ ಹೇಳಿದ್ದಾರೆ.
ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿದ ಬಳಿಕ ಮಾತನಾಡಿದ ಧೋನಿ, 'ನಾವು ಹೇಗೆ ಆಟವಾಡುತ್ತೇವೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗುತ್ತೆ. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡು ಕಡೆಯಿಂದಲೂ ನಾವು ಉತ್ತಮ ಪ್ರದರ್ಶನ ನೀಡಿದ್ದೇವೆ. ದಕ್ಷಿಣ ಆಫ್ರಿಕಾ ಸಹ ಒಂದು ಉತ್ತಮ ಟೀಂ, ಇದು ಮತ್ತೊಂದು ಪರಿಪೂರ್ಣ ಆಟ' ಎಂದಿದ್ದಾರೆ.
ಆಸ್ಟ್ರೇಲಿಯಾದ ಮೆಲ್ಬರ್ನ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 130 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.