ಬಿಸಿಸಿಐ ಸಭೆಯಲ್ಲಿ ಭಾಗವಹಿಸಿದ್ದ ಶ್ರೀನಿವಾಸನ್‌ಗೆ ಸುಪ್ರೀಂ ತರಾಟೆ

ಎನ್ ಶ್ರೀನಿವಾಸನ್
ಎನ್ ಶ್ರೀನಿವಾಸನ್
Updated on: 

ನವದೆಹಲಿ: ಫೆಬ್ರವರಿ 8 ರಂದು ಚೆನ್ನೈನಲ್ಲಿ ನಡೆದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ಬಿಸಿಸಿಐನ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ವಹಿಸಬಾರದಾಗಿತ್ತು ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಬಿಸಿಸಿಐನ ಯಾವುದೇ ಸಭೆಗಳಿಗೆ ಹಾಜರಾಗಬಾರದೆಂಬ ಸುಪ್ರೀಂಕೋರ್ಟ್‌ನ ಆದೇಶವಿದ್ದರು. ಕಳೆದ ಫೆಬ್ರವರಿ 8 ರಂದು ನಡೆದ ಬಿಸಿಸಿಐ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದು ಸರಿಯಲ್ಲ ಎಂದು ನ್ಯಾಯಮೂರ್ತಿಗಳಾದ ಟಿ.ಎಸ್ ಠಾಕೂರ್ ಮತ್ತು ಇಬ್ರಾಹಿಂ ಖಲಿಪುಲ್ಲಾ ಕಿಡಿಕಾರಿದ್ದಾರೆ. ಅಲ್ಲದೆ ಈ ಕುರಿತಂತೆ ನೋಟಿಸ್ ನೀಡಿದ್ದ, ಜನವರಿ 27ರೊಳಗೆ ಉತ್ತರಿಸುವಂತೆ ಸೂಚಿಸಿದ್ದಾರೆ.

ಕ್ರಿಕೆಟ್ ಆಟಕ್ಕಾಗಿ ಶ್ರೀನಿವಾಸನ್ ಅವರು ಶ್ರೇಷ್ಠ ಸೇವೆ ಸಲ್ಲಿಸಿದ್ದಾರೆ ಅದರಲ್ಲಿ ಎರಡು ಮಾತಿಲ್ಲ ಆದರೆ ಸುಪ್ರೀಂಕೋರ್ಟ್ ಆದೇಶವನ್ನು ತಿರಸ್ಕರಿಸಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದೆ ಐಪಿಎಲ್ ಸ್ಫಾಟ್ ಫಿಕ್ಸಿಂಗ್‌ಗೆ ಸಂಬಂಧಿಸಿದಂತೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಬಿಸಿಸಿಐ ಮಂಡಳಿಯ ಅಧ್ಯಕ್ಷ ಚುನಾವಣೆಯಲ್ಲಿ ಭಾಗವಹಿಸಬಾರದು. ಅಷ್ಟೇ ಅಲ್ಲದೆ ಮಂಡಳಿ ನಡೆಸುವ ಯಾವುದೇ ಸಭೆಗಳಲ್ಲಿ ಭಾಗವಹಿಸಬಾರದು ಎಂದು ಸೂಚಿಸಿ ಆದೇಶಿತ್ತು.

ಆದರೆ ಇದನ್ನು ಉಲ್ಲಂಘಿಸಿ ಶ್ರೀನಿವಾಸನ್ ಫೆ.8 ರ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದರು. ಇದನ್ನು ಪ್ರಶ್ನಿಸಿ ಬಿಹಾರ ಕ್ರಿಕೆಟ್ ಕೌನ್ಸಿಲ್ ಸದಸ್ಯರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com