ಆಫ್ರಿಕಾ ಕೆಟ್ಟ ಸೋಲಿಗೆ ಗಂಗೂಲಿ ಅಚ್ಚರಿ

ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪ್ರದರ್ಶನದಿಂದ ಸಂತಸಗೊಂಡಿರುವ ಮಾಜಿ ನಾಯಕ ಸೌರವ್ ಗಂಗೂಲಿ...
ಸೌರವ್ ಗಂಗೂಲಿ
ಸೌರವ್ ಗಂಗೂಲಿ
Updated on: 

ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪ್ರದರ್ಶನದಿಂದ ಸಂತಸಗೊಂಡಿರುವ ಮಾಜಿ ನಾಯಕ ಸೌರವ್ ಗಂಗೂಲಿ, ಬಹು ದಿನಗಳ ನಂತರ ದಕ್ಷಿಣ ಆಫ್ರಿಕಾ  ತಂಡ ಈ ರೀತಿಯಾದ ಹೀನಾಯ ಸೋಲನುಭವಿಸಿದೆ. ಇನ್ನು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಭಾರತ ತಂಡ ಈ ಗೆಲವಿನಿಂದ ಸಾಕಷ್ಟು ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿಶ್ವಕಪ್‍ನಲ್ಲಿ ವೀಕ್ಷಕ ವಿವರಣೆಗಾರರಾಗಿ ರುವ ಗಂಗೂಲಿ, ಭಾರತ ಮತ್ತು ದಕ್ಷಿಣ ಆಫ್ರಿಕಾ  ವಿರುದ್ಧದ  ಪಂದ್ಯದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಾಕಷ್ಟು ವರ್ಷಗಳ ನಂತರ ದಕ್ಷಿಣ ಆಫ್ರಿಕಾ  ತಂಡ ಆಘಾತಕಾರಿಯಾದಸೋಲನುಭವಿಸಿದೆ ಎಂದರು. ಶಿಖರ್ ಧವನ್ ಬ್ಯಾಟಿಂಗ್ ಕುರಿತು ಮಾತನಾಡಿದ ಗಂಗೂಲಿ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ ಅರ್ಧಶತಕ ದಾಖಲಿಸಿದ ಇನಿಂಗ್ಸ್ ಅತ್ಯಾವಶ್ಯಕವಾಗಿತ್ತು.
ಸರಿಯಾದ ಸಮಯದಲ್ಲಿ ಲಯವನ್ನು ಕಂಡುಕೊಂಡಿ ದ್ದು, ಧವನ್ ಇನಿಂಗ್ಸ್ ಕಟ್ಟಿದ ರೀತಿ ಅತ್ಯುತ್ತಮವಾಗಿತ್ತು ಎಂದು ಸೌರವ್ ತಿಳಿಸಿದರು. ಮಧ್ಯಮ ಕ್ರಮಾಂಕದಲ್ಲಿನ ವೈಫ ಲ್ಯದ ಬಗ್ಗೆ ಮಾತನಾಡಿದ ಗಂಗೂಲಿ, ಸುರೇಶ್ ರೈನಾ, ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಟೂರ್ನಿಯಲ್ಲಿ ಫಾರ್ಮ್ ಕಂಡುಕೊಳ್ಳುವುದು ಅನಿವಾರ್ಯವಾಗಿ ದೆ. ಟೀಂ ಇಂಡಿಯಾ ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ,ಅಜಿಂಕ್ಯ ರಹಾನೆ ಅವರು ರನ್ ಗಳಿಸುವುದರ ಮೇಲೆ ಹೆಚ್ಚು ಅವಲಂಬಿತವಾಗಿ ದೆ. ಹಾಗಾಗಿ ಮಧ್ಯಮ ಕ್ರಮಾಂಕದಲ್ಲಿ ಇತರೆ ಬ್ಯಾಟ್ಸ್ಮನ್‍ಗಳು ಉತ್ತಮ ಕಾಣಿಕೆ ನೀಡಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com