

ಮುಂಬೈ: ನಾಳೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಚುನಾವಣೆ ನಡೆಯಲಿದ್ದು, ಮಾಜಿ ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್ ಚುನಾವಣೆಗೆ ಸ್ಪರ್ಧೆಸದಂತೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನಲೆಯಲ್ಲಿ ಜಗಮೋಹನ್ ದಾಲ್ಮಿಯಾ ಅಧ್ಯಕ್ಷ ಸ್ಥಾನದ ಅಗ್ರ ರೇಸ್ನಲ್ಲಿದ್ದಾರೆ.
ಹೀಗಾಗಿ, ದಾಲ್ಮಿಯಾ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ. ದಾಲ್ಮಿಯಾ ಈ ಹಿಂದೆ ಐಸಿಸಿ ಮತ್ತು ಬಿಸಿಸಿಐ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದರು. ಇನ್ನು ಕರ್ನಾಟಕ ಬ್ರಿಜೇಶ್ ಪಟೇಲ್ ಸಹ ಖಜಾಂಚಿ ಅಥವಾ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ. ಬ್ರೀಜೇಶ್, ಶ್ರೀನಿ ಬಣದಲ್ಲಿ ಗುರುತಿಸಿಕೊಂಡಿರುವುದರಿಂದ ಅವರಿಗೆ ಒಂದು ಹುದ್ದೆ ಸಿಗುವ ಸಾಧ್ಯತೆ ಇದೆ.