ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ
ಕ್ರೀಡೆ
ವಿಶ್ವಕಪ್‌ಗೆ ರವೀಂದ್ರ ಜಡೇಜಾ ಅನುಮಾನ?
ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಡುವುದು ಅನುಮಾನವಾಗಿದೆ...
ನವದೆಹಲಿ: ಭುಜದ ನೋವಿನಿಂದ ಬಳಲುತ್ತಿರುವ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಮುಂಬರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಡುವುದು ಅನುಮಾನವಾಗಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಭ್ಯಾಸದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡ ಜಡೇಜಾ ಅವರಿಗೆ ಕನಿಷ್ಠ ಆರರಿಂದ ಏಳು ವಾರಗಳ ಕಾಲ ವಿಶ್ರಾಂತಿ ಅಗತ್ಯವಿರುವ ಹಿನ್ನೆಲೆಯಲ್ಲಿ ಜಡೇಜಾ ಮುಂದಿನ ತಿಂಗಳು ಆರಂಭವಾಗಲಿರುವ ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.
ಪ್ರಸ್ತುತ ಜಡೇಜಾ ಚಿಕಿತ್ಸೆ ಪಡೆಯುತ್ತಿದ್ದರೂ, ಚೇತರಿಕೆ ನಿರೀಕ್ಷಿತ ಪ್ರಮಾಣದಲ್ಲಿಲ್ಲ. ಹಾಗಾಗಿ ಜಡೇಜಾ ಸ್ಥಾನವನ್ನು ತುಂಬಲು ಆಲ್‌ರೌಂಡರ್‌ಗಳಾದ ಕರ್ನಾಟಕದ ಸ್ಟುವರ್ಟ್ ಬಿನ್ನಿ ಹಾಗೂ ಅಕ್ಷರ್ ಪಟೇಲ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.


