ಪದ್ಮಭೂಷಣಕ್ಕೆ ಸೈನಾ ಹೆಸರು ಮರುಶಿಫಾರಸ್ಸು?

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್...
ಸೈನಾ ನೆಹ್ವಾಲ್
ಸೈನಾ ನೆಹ್ವಾಲ್

ನವದೆಹಲಿ: ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರ ಹೆಸರನ್ನು ಈ ಬಾರಿಯ ಪದ್ಮಭೂಷಣ ಪ್ರಶಸ್ತಿಗೆ ಮತ್ತೆ ಶಿಫಾರಸ್ಸು ಮಾಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಸರ್ಬಾನಂದ ಸೊನೊವಾಲ್ ತಿಳಿಸಿದ್ದಾರೆ.

ಇದೇ ವೇಳೆ, ಪದ್ಮಭೂಷಣ ಪ್ರಶಸ್ತಿಗಾಗಿ ಸೈನಾ ಅವರ ಹೆಸರನ್ನು ಶಿಫಾರಸ್ಸು ಮಾಡುವಲ್ಲಿ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ತಡ ಮಾಡಿತ್ತು ಎಂದು ಅವರು ತಿಳಿಸಿದರು.

ಈ ಬಾರಿಯ ಪದ್ಮಭೂಷಣ ಪ್ರಶಸ್ತಿಗಾಗಿ ಸೈನಾ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿತ್ತು. 2010ರಲ್ಲಿ ಪದ್ಮಶ್ರೀ ಅರ್ಜಿ ತಿರಸ್ಕೃತಗೊಂಡಿತ್ತು. 2010ರಲ್ಲಿ ಪದ್ಮಶ್ರೀ ಪಡೆದಿದ್ದ ಅವರು 5 ವರ್ಷಗಳವರೆಗೆ ಪದ್ಮಭೂಷಣ ಪ್ರಶಸ್ತಿ ಪಡೆಯುವ ಹಾಗಿಲ್ಲ ಎಂಬ ನಿಯಮದಡಿ ಅರ್ಜಿ ತಿರಸ್ಕಾರಗೊಂಡಿತ್ತು.

ಆದರೆ, 2011ರಲ್ಲಿ ಪದ್ಮಶ್ರೀ ಪಡೆದಿದ್ದ ಕುಸ್ತಿ ಪಟು ಸುಶೀಲ್ ಕುಮಾರ್ ಅವರ ಹೆಸರನ್ನು ಈ ಬಾರಿಯ ಪದ್ಮಭೂಷಣ ಪ್ರಶಸ್ತಿಗೆ ಅಂಗೀಕರಿಸಲಾಗಿತ್ತು. ಈ ಬಗ್ಗೆ ಸೈನಾ ಅಸಮಾಧಾನ ಪ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com