
ಮೆಲ್ಬೋರ್ನ್: ತ್ರಿಕೋನ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಅತಿಥೇಯ ಆಸ್ಟ್ರೇಲಿಯಾ ತಂಡ ಭಾರತದ ವಿರುದ್ಧ 4 ವಿಕೆಟ್‌ಗಳ ಅಂತರದ ಜಯ ಸಾಧಿಸಿದೆ.
ತ್ರಿಕೋನ ಏಕದಿನ ಸರಣಿಯ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 267ರನ್‌ಗಳ ಗುರಿಯನ್ನು 6 ವಿಕೆಟ್‌ಗಳನ್ನು ಕಳೆದುಕೊಂಡು ಆಸ್ಟ್ರೇಲಿಯಾ ತಂಡ ಮುಟ್ಟಿತು. ಪಂದ್ಯದ ಕೊನೆಯ ಹಂತದಲ್ಲಿ ಗೆಲುವು ಅತ್ತ ಇತ್ತ ವಾಲುತ್ತಿತ್ತಾದರೂ, ಉತ್ತಮವಾಗಿ ಆಡಿದ ಜೇಮ್ಸ್ ಫಾಲ್ಕನರ್ ಅವರು ಅಂತಿಮವಾಗಿ ಆಸ್ಟ್ರೇಲಿಯಾ ಪರ ಜಯದ ರನ್‌ಗಳಿಸಿದರು. ಆ ಮೂಲಕ ಆಸ್ಟ್ರೇಲಿಯಾ ತಂಡ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಆ್ಯರನ್ ಫಿಂಚ್ (96 ರನ್) ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನ, ವಾಟ್ಸನ್ (41) ಮತ್ತು ಸ್ಮಿತ್ (47)ಅವರ ಸಮಯೋಚಿತ ಆಟದ ನೆರವಿನಿಂದ ಆಸ್ಟ್ರೇಲಿಯಾ ತಂಡ 269 ರನ್‌ಗಳಿಸುವ ಮೂಲಕ ಎರಡನೇ ಏಕದಿನ ಪಂದ್ಯದಲ್ಲಿಯೂ ಗೆಲುವು ಸಾಧಿಸಿತು.
ಭಾರತದ ಪರ ಉಮೇಶ್ ಯಾದವ್ 2 ವಿಕೆಟ್‌ಗಳನ್ನು ಕಬಳಿಸಿದರೆ, ಭುವನೇಶ್ವರ್ ಕುಮಾರ್, ಮಹಮದ್ ಶಮಿ, ಪಟೇಲ್ ಮತ್ತು ಅಶ್ವಿನ್ ತಲಾ 1 ವಿಕೆಟ್ ಪಡೆದರು. ಇದಕ್ಕೂ ಮೊದಲು ಸಿಡ್ನಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿಯೂ ಆಸ್ಟ್ರೇಲಿಯಾ ತಂಡ 3 ವಿಕೆಟ್‌ಗಳ ಅಂತರದ ಜಯ ಸಾಧಿಸಿತ್ತು.
Advertisement