
ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಪ್ಪನ್ ಮತ್ತು ರಾಜಸ್ತಾನ ರಾಯಲ್ಸ್‌ನ ಸಹ ಮಾಲೀಕ ರಾಜ್ ಕುಂದ್ರಾ ತಪ್ಪಿತಸ್ಥರು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ 130 ಪುಟಗಳ ತೀರ್ಪನ್ನು ಪ್ರಕಟಿಸಿದೆ. ಮೇಯಪ್ಪನ್ ಹಾಗೂ ಕುಂದ್ರಾ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದೆ.
ಶ್ರೀನಿವಾಸನ್‌ಗೆ ರಿಲೀಫ್
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ವಿರುದ್ಧದ ಆರೋಪಗಳು ಸಾಬೀತಾಗಿಲ್ಲದ ಕಾರಣ ಪ್ರಕರಣದಿಂದ ರಿಲೀಫ್ ಸಿಕ್ಕಿದೆ.
ಶ್ರೀನಿವಾಸನ್ ವಿರುದ್ಧ ತಪ್ಪುಗಳನ್ನು ಮುಚ್ಚಿಟ್ಟ ಆರೋಪಗಳಿದ್ದು ಅವುಗಳಿಗೆ ಪೂರಕವಾದ ಸಾಕ್ಷ್ಯಗಳು ಸಿಗದ ಹಿನ್ನೆಲೆಯಲ್ಲಿ ಶ್ರೀನಿವಾಸನ್‌ರಿಗೆ ಪ್ರಕರಣದಿಂದ ವಿನಾಯಿತಿ ನೀಡಲಾಗಿದೆ.
Advertisement