

ಮೆಲ್ಬೋರ್ನ್: ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಮಿಶ್ರ ಡಬಲ್ಸ್‌ನಲ್ಲಿ ಭಾರತದ ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಜಾ ಜೋಡಿಗಳು ಸೆಮಿಫೈನಲ್ ಪ್ರವೇಶಿಸಿವೆ.
ಕ್ವಾಟರ್‌ಫೈನಲ್‌ನಲ್ಲಿ ಸಾನಿಯಾ ಮಿರ್ಜಾ ಜೋಡಿ 53 ನಿಮಿಷಗಳಲ್ಲಿ ಎದುರಾಳಿ ಕೇಸಿ ಡೇಲ್ಕ್ವಾ ಮ್ತತು ಜೋನ್ ಪಿರ್ಸ್ ವಿರುದ್ಧ 6-2, 6-2 ನೇರ ಸೆಟ್‌ಗಳಿಂದ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಲಿಯಾಂಡರ್ ಪೇಸ್ ಹಾಗೂ ಸ್ವಿಟ್ಜರ್‌ಲೆಂಡ್‌ನ ಮಾರ್ಟಿನಾ ಹಿಂಗೀಸ್ ಜೋಡಿ 6-3, 6-1 ಸೆಟ್‌ಗಳ ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.