ವಿಜೇಂದರ್ ಸಿಂಗ್
ಕ್ರೀಡೆ
ನ್ಯಾಷನಲ್ ಗೇಮ್ಸ್‌ನಲ್ಲಿ ವಿಜೇಂದರ್ ಭಾಗವಹಿಸಲ್ಲ
ಮೂಗಿಗೆ ಗಾಯವಾಗಿರುವ ಕಾರಣ ಭಾರತದ ಬಾಕ್ಸಿಂಗ್ ಪಟು ವಿಜೇಂದರ್ ಸಿಂಗ್ ಈ ಬಾರಿ ನ್ಯಾಷನಲ್ ಗೇಮ್ಸ್‌ನಲ್ಲಿ...
ತಿರುವನಂತಪುರಂ: ಮೂಗಿಗೆ ಗಾಯವಾಗಿರುವ ಕಾರಣ ಭಾರತದ ಬಾಕ್ಸಿಂಗ್ ಪಟು ವಿಜೇಂದರ್ ಸಿಂಗ್ ಈ ಬಾರಿ ನ್ಯಾಷನಲ್ ಗೇಮ್ಸ್‌ನಲ್ಲಿ ಭಾಗವಹಿಸುವುದಿಲ್ಲ.
ಮೂಗಿಗೆ ಗಾಯಗಳಾಗಿರುವ ಕಾರಣ ಏಷ್ಯನ್ ಗೇಮ್ಸ್‌ನಲ್ಲಿಯೂ ಭಾಗವಹಿಸಲು ಸಾಧ್ಯವಾಗಿಲ್ಲ. ಕೆಲವು ದಿನಗಳ ಹಿಂದೆ ಅಭ್ಯಾಸ ನಡೆಸುತ್ತಿದ್ದ ವೇಳೆ ಮತ್ತೆ ನೋವು ಕಾಣಿಸಿಕೊಂಡಿತ್ತು ಎಂದು ವಿಜೇಂದರ್ ಹೇಳಿದ್ದಾರೆ. ಇದು ದೊಡ್ಡ ಗಾಯವೇನೂ ಅಲ್ಲ ಆದರೆ ನಾನು ಎಚ್ಚರಿಕೆ ವಹಿಸಬೇಕಾಗಿದೆ. ಈ ಗಾಯಗಳನ್ನು ಲೆಕ್ಕಿಸದೆ ಕ್ರೀಡೆಯಲ್ಲಿ ಭಾಗವಹಿಸಿ ಇನ್ನಷ್ಟು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳಲು ನಾನು ಬಯಸುವುದಿಲ್ಲ. ಆದ್ದರಿಂದಲೇ ನಾನು ನ್ಯಾಷನಲ್ ಗೇಮ್ಸ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಇನ್ನೊಂದಷ್ಟು ದಿನದ ನಂತರ ನಾನು ಮರಳಿ ಬರುವೆ ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ಗ್ಲಾಸ್ಗೋನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 29ರ ಹರೆಯದ ವಿಜೇಂದರ್ ಬೆಳ್ಳಿ ಪದಕ ಗೆದ್ದಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ