ಮಿಥಲಿ ರಾಜ್ ಅಮೋಘ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಪ್ರವಾಸಿ ನ್ಯೂಜಿಲ್ಯಾಂಡ್ ವನಿತೆಯರ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ...
ಭಾರತ ವನಿತ ತಂಡ
ಭಾರತ ವನಿತ ತಂಡ
Updated on: 

ಬೆಂಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡ ಪ್ರವಾಸಿ ನ್ಯೂಜಿಲ್ಯಾಂಡ್ ವನಿತೆಯರ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ಕ್ರಿಕೆಟ್ ಸರಣಿಯ 4ನೇ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ನ್ಯೂಜಿಲ್ಯಾಂಡ್ ವನಿತೆಯರ ತಂಡ 49.5 ಓವರ್ ಗಳಲ್ಲಿ 220 ರನ್ ಗಳಿಗೆ ಆಲೌಟ್ ಆಯಿತು. 221 ರನ್ ಗಳ ಗುರಿ ಬೆನ್ನತ್ತಿದ ಭಾರತ ಪರ ನಾಯಕಿ ಮಿಥಿಲಿ ರಾಜ್ ಅವರ ಅಮೋಘ ಬ್ಯಾಟಿಂಗ್ ನಲ್ಲಿ ಪ್ರದರ್ಶನದಿಂದಾಗಿ 44.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 221 ರನ್ ದಾಖಲಿಸಿ ಗೆಲುವಿನ ನಗೆ ಬೀರಿದರು.

ನಾಯಕಿ ಮಿಥಲಿ ರಾಜ್ 88 ಎಸೆತಗಳಲ್ಲಿ 10 ಬೌಂಡರಿ ನೆರವಿನಿಂದ ಅಜೇಯ 81 ರನ್ ದಾಖಲಿಸಿ ತಂಡವನ್ನು ಗೆಲುವಿನ ದಡ ತಲುಪಿಸುವಲ್ಲಿ ಯಶಸ್ವಿಯಾಗಿದರು. ತಂಡಕ್ಕೆ ಉತ್ತಮ ಆರಂಭ ನೀಡಿದ ತ್ರೀಷು ಕಾಮಿನಿ 31 ರನ್ ಗಳಿಸಿದರೆ, ಸ್ಮೃತಿ ಮಂದಾನ 99 ಎಸೆತಗಳಲ್ಲಿ 8 ಬೌಂಡರಿ ಸಮೇತ 66 ರನ್ ದಾಖಲಿಸಿದರು. ನಾಯಕಿ ಮಿಥಲಿ ರಾಜ್'ರೊಂದಿಗೆ ಅಜೇಯರಾಗಿ ಉಳಿದ ರಮನ್ ಪ್ರೀತ್ ಕೌರ್ 32 ರನ್ ದಾಖಲಿಸಿ ತಂಡದ ಗೆಲುವಿಗೆ ಸಹಕಾರಿಯಾಗಿದರು.

ಉಭಯ ತಂಡಗಳು 2-2 ರಿಂದ ಸಮಬಲ ಸಾಧಿಸಿದ್ದು, ನಿರ್ಣಾಯಕ ಪಂದ್ಯ ಜುಲೈ 8 ರಂದು ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com