ಒಳ್ಳೆಯ ಆಟಗಾರರಿಗೆ ಪೆಟ್ಟು: ರಾಹುಲ್

ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‍ನ ಸಮಿತಿಯು ನೀಡಿರುವ ತೀರ್ಪು ಎರಡೂ ತಂಡಗಳಲ್ಲಿರುವ..
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್

ನವದೆಹಲಿ: ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‍ನ ಸಮಿತಿಯು ನೀಡಿರುವ ತೀರ್ಪು ಎರಡೂ ತಂಡಗಳಲ್ಲಿರುವ ಒಳ್ಳೆಯ ಆಟಗಾರರನ್ನು ಬಾಧಿಸಲಿದೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಪ್ರಧಾನ ಸಲಹೆಗಾರ ರಾಹುಲ್ ದ್ರಾವಿಡ್ ತಿಳಿಸಿದ್ದಾರೆಂದು ಎನ್‍ಡಿಟಿವಿ ವರದಿ ಮಾಡಿದೆ.

ಬೆಟ್ಟಿಂಗ್ ಹಗರಣದ ತನಿಖೆ ನಡೆಸಿದ್ದ ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾ. ಆರ್.ಎಂ. ಲೋಧಾ ನೇತೃತ್ವದ ಸಮಿತಿ, ಹಗರಣದಲ್ಲಿ ಭಾಗಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡವನ್ನು ಮುಂದಿನ ಎರಡು ಐಪಿಎಲ್ ಆವೃತ್ತಿಗಳಿಂದ ನಿಷೇಧಿಸಿ ಮಂಗಳವಾರ ತೀರ್ಪು ಪ್ರಕಟಿಸಿತ್ತು.

ಇದಾಗಿ, ಎರಡು ದಿನಗಳ ನಂತರ ಈ ಬಗ್ಗೆ ಈ ಬಗ್ಗೆ ಪ್ರತಿಕ್ರಿಯಿಸಿರುವ ದ್ರಾವಿಡ್, ``ಸುಪ್ರೀಂ ಕೋರ್ಟ್‍ನ ತೀರ್ಪು ನನಗೆ ನಿರಾಸೆ ತಂದಿದೆ. ಆದರೆ, ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಎಲ್ಲರೂ ಗೌರವಿಸಬೇಕಾಗುತ್ತದೆ'' ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com