

ಕೋಲ್ಕತಾ: ಭಾರತದ ಕ್ರಿಕೆಟ್ ವೇಗಿ ಮೊಹಮ್ಮದ್ ಶಮಿ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಈದ್ ಉಲ್ ಫಿತರ್ ಸಂಭ್ರಮದ ಜತೆಗೆ ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿದ್ದಾರೆ.
ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ನಿನ್ನೆ ಮಧ್ಯಾಹ್ನ 2.40ರ ಸುಮಾರಿಗೆ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದರು.
ಬಳಿಕ ಸುದ್ಧಿ ಸಂಸ್ಥೆಯೊಂದಿಗೆ ಮಾತನಾಡಿದ ಶಮಿ ನನ್ನ ಮಡದಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದರು.