ಐಪಿಎಲ್ ಕಗ್ಗಂಟು: ಸಮಿತಿ ರಚನೆಗೆ ಬಿಸಿಸಿ ನಿರ್ಧಾರ

ಐಪಿಎಲ್ ಟೂರ್ನಿಗೆ ಸಂಬಂಧಿಸಿದಂತೆ ಮುಂದೆ ಕೈಗೊಳ್ಳಬಹುದಾದ ನಿರ್ಧಾರಗಳ ಬಗ್ಗೆ ಸಲಹೆಗಳನ್ನು ನೀಡಲು ಹೊಸ ಸಮಿತಿಯೊಂದನ್ನು ರಚಿಸುವುದಾಗಿ ಬಿಸಿಸಿಐ ಹೇಳಿದೆ.
ಬಿಸಿಸಿಐ(ಸಂಗ್ರಹ ಚಿತ್ರ)
ಬಿಸಿಸಿಐ(ಸಂಗ್ರಹ ಚಿತ್ರ)

ನವದೆಹಲಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್.ಎಂ ಲೋಧಾ ನೇತೃತ್ವದ ಸಮಿತಿ ನೀಡಿದ್ದ ಆದೇಶನವನ್ನು ಪರಿಶೀಲಿಸಲು ಹಾಗೂ ಐಪಿಎಲ್ ಟೂರ್ನಿಗೆ ಸಂಬಂಧಿಸಿದಂತೆ ಮುಂದೆ ಕೈಗೊಳ್ಳಬಹುದಾದ ನಿರ್ಧಾರಗಳ ಬಗ್ಗೆ ಸಲಹೆಗಳನ್ನು ನೀಡಲು ಹೊಸ ಸಮಿತಿಯೊಂದನ್ನು ರಚಿಸುವುದಾಗಿ ಬಿಸಿಸಿಐ ಹೇಳಿದೆ.

ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ. ಆರ್.ಎಂ ಲೋಧಾ, ಐಪಿಎಲ್ ಪ್ರಾಂಚೈಸಿ ಗಳಾದ ಚೆನ್ನೈ ಸೂಪರ್ ಕಿಂಗ್ಸ್(ಸಿ.ಎಸ್.ಕೆ) ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳನ್ನು 2 ವರ್ಷಗಳವರೆಗೆ ಐಪಿಎಲ್ ನಿಂದ ನಿಷೇಧಿಸಿ ಆದೇಶ ನೀಡಿದರು. ಈ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಡಳಿತ ಮಂಡಳಿಯ ಸಭೆ ಕರೆಯಲಾಗಿತ್ತು. ಆದರೆ ಸಭೆಯಲ್ಲಿ ತಂಡಗಳ ನಿಷೇಧದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿರಲಿಲ್ಲ.

ಬದಲಿಗೆ ಐವರು ಸದಸ್ಯರುಳ್ಳ ಸಮಿತಿಯನ್ನು ನೇಮಿಸಲು ನಿರ್ಧರಿಸಲಾಗಿದೆ. ನ್ಯಾ. ಲೋಧಾ ಆದೇಶವನ್ನು ಅಧ್ಯಯನ ಮಾಡಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳನ್ನು ಐಪಿಎಲ್ ಆಡಳಿತ ಮಂಡಳಿಗೆ ಸಲಹೆಗಳನ್ನು ನೀಡುವ ಜವಾಬ್ದಾರಿ ಈ ಸಮಿತಿಗೆ ನೀಡಲಾಗಿದೆ. ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಗೈರು ಹಾಜರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಐಪಿಎಲ್ ಆಯುಕ್ತ ರಾಜೀವ್ ಶುಕ್ಲಾ ಅಜಯ್ ಶಿರ್ಕೆ, ಟೀಂ ಇಂಡಿಯಾ ಮುಖ್ಯ ತರಬೇತುದಾರ ಹಾಗೂ ನಿರ್ದೇಶಕ ರವಿಶಾಸ್ತ್ರಿ ಹಾಗೂ ಜೋತಿರಾದಿತ್ಯ ಸಿಂಧಿಯಾ, ಐಪಿಎಲ್ ಆಡಳಿತ ಮಂಡಳಿ ಸದಸ್ಯ ಸೌರವ್ ಗಂಗೂಲಿ ಮುಂತಾದವರು ಪಾಲ್ಗೊಂಡಿದ್ದರು.

ತಂಡಗಳ ರದ್ದತಿಗೆ ನಕಾರ:
ಸಭೆಯಲ್ಲಿ ಭಾಗವಹಿಸಿದ್ದ ಐಪಿಎಲ್ ಆಡಳಿತ ಮಂಡಳಿ ಸದಸ್ಯ ಹಾಗೂ ಬಿಸಿಸಿಐ ನ ಮಾಜಿ ಖಜಾಂಚಿ ಅಜಯ್ ಶಿರ್ಕೆ ಅವರು ಸಿ.ಎಸ್.ಕೆ ಹಾಗೂ ಆರ್.ಆರ್ ತಂಡಗಳನ್ನು ರದ್ದುಗೊಳಿಸುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪ ಮಾಡಿದರು. ಆದರೆ ಅದಕ್ಕೆ ಆಡಳಿತ ಮಂಡಳಿಯ ಇತರ ಸದಸ್ಯರು ಒಪ್ಪಲಿಲ್ಲ ಎನ್ನಲಾಗಿದೆ.    

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com