ಕ್ರೀಡೆ

ಕ್ರಿಕೆಟಿಗರ ಮೇಲೆ ಹೇರಿರುವ ನಿಷೇಧ ರದ್ಧತಿಗೆ ಬಿಸಿಸಿಐ ನಕಾರ

ಕ್ರಿಕೆಟಿಗರ ಮೇಲೆ ಹೇರಿರುವ ನಿಷೇಧ ರದ್ಧತಿಗೆ ಬಿಸಿಸಿಐ ನಕಾರ
ಶ್ರೀಶಾಂತ್, ಅಜಿತ್ ಚಾಂಡೀಲಾ, ಅಂಕಿತ್ ಚವ್ಹಾಣ್(ಸಂಗ್ರಹ ಚಿತ್ರ)
Published On :

ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಿಂದ ಖುಲಾಸೆಗೊಂಡಿರುವ ಶ್ರೀಶಾಂತ್, ಅಜಿತ್ ಚಂಡಿಲಾ ಮತ್ತು ಅಂಕಿತ್ ಚೌಹಾಣ್ ಅವರ ಮೇಲೆ ಹೇರಿರುವ ನಿಷೇಧವನ್ನು ತೆರವು ಮಾಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರಾಕರಿಸಿದೆ.

2013ರಲ್ಲಿ ಐಪಿಎಲ್‌ ಟಿ-20 ಕ್ರಿಕೆಟ್‌ ಪಂದ್ಯಾವಳಿಯ 6ನೇ ಆವೃತ್ತಿ ಸಂದರ್ಭ ಸ್ಫೋಟಗೊಂಡ ಸ್ಪಾಟ್‌ ಫಿಕ್ಸಿಂಗ್‌ ಹಗರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ್‌ ರಾಯಲ್ಸ್‌ ತಂಡದ ಆಟಗಾರರಾಗಿದ್ದ ಎಸ್‌. ಶ್ರೀಶಾಂತ್‌, ಅಂಕಿತ್‌ ಚವಾಣ್‌ ಮತ್ತು  ಅಜಿತ್‌ ಚಂಡೀಲಾ ಸಹಿತ 36 ಮಂದಿಯನ್ನು ದೆಹಲಿಯ ಸ್ಥಳೀಯ ನ್ಯಾಯಾಲಯ ದೋಷಮುಕ್ತಗೊಳಿಸಿತ್ತು.

ಆದರೆ, ಬಿಸಿಸಿಐ ಮಾತ್ರ, ಶ್ರೀಶಾಂತ್‌ ಹಾಗೂ ಅಂಕಿತ್‌ ಚವಾಣ್‌ ಮೇಲೆ ಹೇರಿರುವ ಆಜೀವ ನಿಷೇಧ ಸದ್ಯಕ್ಕೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.

ಶಿಸ್ತು ಕ್ರಮಕ್ಕೂ, ಅಪರಾಧಕ್ಕೆ ಕೈಗೊಳ್ಳುವ ಕ್ರಮಕ್ಕೂ ವ್ಯತ್ಯಾಸವಿದೆ. ಎರಡು ವಿಭಿನ್ನವಾಗಿದೆ. ಈ ಆಟಗಾರರ ಅಶಿಸ್ತಿನಿಂದಾಗಿ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಹಾಗಾಗಿ, ಅವರ ಮೇಲೆ ಹೇರಿರುವ ನಿಷೇಧ ಮುಂದುವರೆಯಲಿದೆ ಎಂದು ಮಂಡಳಿ ಕಾರ್ಯದರ್ಶಿ ಅನುರಾಗ್ ಠಾಕೂರ್​ಹೇಳಿದ್ದಾರೆ.

ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ್ದ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಬಿಸಿಸಿಐ ನಡೆಸಿದ ಬಿಸಿಸಿಐ ತನಿಖಾ ವರದಿಯಲ್ಲಿ ತಪ್ಪಿತಸ್ಥರು ಎಂದು ಹೇಳಲಾಗಿತ್ತು. ಈ ಹಿನ್ನಲೆಯಲ್ಲಿ ಬಿಸಿಸಿಐ ಶ್ರೀಶಾಂತ್, ಅಜಿತ್ ಚಂಡಿಲಾ, ಅಂಕಿತ್ ಚೌಹಾಣ್ ಅವರ ಮೇಲೆ ಆಜೀವ ನಿಷೇಧ ಹೇರಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.